AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ್ಣುಗಳಿಗೆ ಇಲಿ ಪಾಷಾಣ ಸವರುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಾಪಾರಿ

ಹಣ್ಣುಗಳಿಗೆ ಇಲಿ ಪಾಷಾಣ ಸವರುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಾಪಾರಿ

ಅಕ್ಷಯ್​ ಪಲ್ಲಮಜಲು​​
|

Updated on:Feb 25, 2026 | 5:09 PM

Share

ಮುಂಬೈನ ಮಾಲಾಡ್‌ನಲ್ಲಿ ಹಣ್ಣಿನ ವ್ಯಾಪಾರಿಯೊಬ್ಬರು ಹಣ್ಣುಗಳಿಗೆ 'ರಾಟೋಲ್' ಇಲಿ ಪಾಷಾಣ ಹಚ್ಚುತ್ತಿದ್ದುದು ವೈರಲ್ ಆಗಿದೆ. ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಲಿಗಳಿಂದ ಹಣ್ಣುಗಳನ್ನು ರಕ್ಷಿಸಲು ಹೀಗೆ ಮಾಡುತ್ತಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮನುಷ್ಯರು ಸೇವಿಸುವ ಹಣ್ಣುಗಳಿಗೆ ವಿಷಕಾರಿ ವಸ್ತುಗಳನ್ನು ಬಳಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಇದು ಆಹಾರ ಸುರಕ್ಷತೆಗೆ ಗಂಭೀರ ಬೆದರಿಕೆಯಾಗಿದೆ.

ಮುಂಬೈ: ಮುಂಬೈನ ಮಾಲಾಡ್ ಪ್ರದೇಶದಲ್ಲಿ ನಡುರಸ್ತೆಯಲ್ಲೇ ಹಣ್ಣುಗಳ ವ್ಯಾಪಾರಿಯೊಬ್ಬರು ಹಣ್ಣುಗಳಿಗೆ ‘ರಾಟೋಲ್’ (Ratol) ಎಂಬ ಇಲಿ ಪಾಷಾಣವನ್ನು ಸವರುತ್ತಿದ್ದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಕೃತ್ಯವನ್ನು ಗಮನಿಸಿದ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವ್ಯಾಪಾರಿಯು ತನ್ನ ಹಣ್ಣಿನ ತಳ್ಳುಗಾಡಿಯ ಮೇಲೆ ಹಣ್ಣುಗಳನ್ನು ಜೋಡಿಸುವ ಮೊದಲು ಅವುಗಳಿಗೆ ಇಲಿ ಪಾಷಾಣವನ್ನು ಹಚ್ಚುತ್ತಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ಹಣ್ಣುಗಳಿಗೆ ಇಲಿಗಳು ಬರದಂತೆ ತಡೆಯಲು ಇಂತಹ ಅಪಾಯಕಾರಿ ಕೆಲಸ ಮಾಡುತ್ತಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮನುಷ್ಯರು ಸೇವಿಸುವ ಹಣ್ಣುಗಳ ಮೇಲೆ ಇಂತಹ ವಿಷಕಾರಿ ರಾಸಾಯನಿಕ ಬಳಸುವುದು ಕ್ರಿಮಿನಲ್ ಅಪರಾಧವಾಗಿದೆ.

ವಿಡಿಯೋದಲ್ಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 25, 2026 05:09 PM
Follow Us