ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಮೆಟ್ರೋ ಕಾಂಕ್ರೀಟ್ ಸ್ಲ್ಯಾಬ್: ಅವಶೇಷದ ಅಡಿ ಸಿಲುಕಿ ಒದ್ದಾಡಿದ ಮಹಿಳೆ
ಮುಂಬೈನ ಮುಲುಂಡ್ ವೆಸ್ಟ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಲೈನ್ 4 ರ ಸ್ಲ್ಯಾಬ್ ಕುಸಿದು ಭೀಕರ ಅವಘಡ ಸಂಭವಿಸಿದೆ. ಎಲ್‌ಬಿಎಸ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಬಿದ್ದಿದ್ದು, ಆಟೋರಿಕ್ಷಾ ಮತ್ತು ಕಾರುಗಳು ನಜ್ಜುಗುಜ್ಜಾಗಿವೆ. ಓರ್ವ ಆಟೋ ಚಾಲಕ ಮತ್ತು ಮಹಿಳೆ ಅವಶೇಷಗಳಡಿಯಲ್ಲಿ ಸಿಲುಕಿ, ರಕ್ಷಣಾ ಸಿಬ್ಬಂದಿ ಅವರನ್ನು ಹೊರತೆಗೆದಿದ್ದಾರೆ. ಘಟನೆಯಲ್ಲಿ 3-4 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರ, ಫೆ.14: ಮುಂಬೈನಲ್ಲಿ ಇಂದು (ಶನಿವಾರ) ಭೀಕರ ಅವಘಡವೊಂದು ಸಂಭವಿಸಿದೆ. ಮುಲುಂಡ್ ವೆಸ್ಟ್‌ನ ಎಲ್‌ಬಿಎಸ್ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೈನ್ 4 (Mumbai Metro Line 4) ರ ಪಿಲ್ಲರ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಹಠಾತ್ತನೆ ಕೆಳಗೆ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿದೆ. ಜಾನ್ಸನ್ ಆಂಡ್ ಜಾನ್ಸನ್ ಕಚೇರಿಯ ಸಮೀಪವಿರುವ ಓಬೆರಾಯ್ ಪ್ರೆಮಿಸಸ್ ಬಳಿ ಈ ಘಟನೆ ನಡೆದಿದೆ. ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾರೀ ಗಾತ್ರದ ಸ್ಲ್ಯಾಬ್ ರಸ್ತೆಗೆ ಬಿದ್ದಿದೆ. ಈ ವೇಳೆ ಕೆಳಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಆಟೋ ಚಾಲಕ ಮತ್ತು ಓರ್ವ ಮಹಿಳೆ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಅವರನ್ನು ಹರಸಾಹಸ ಪಟ್ಟು ಹೊರತೆಗೆದಿದ್ದಾರೆ. ಈ ಘಟನೆಯಲ್ಲಿ ಸುಮಾರು 3 ರಿಂದ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು


