ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಖೋಪೋಲಿ ಬಳಿ ಟ್ರಕ್‌ಗೆ ಬಸ್ ಡಿಕ್ಕಿ; 18 ಮಂದಿಗೆ ಗಾಯ
ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದರಲ್ಲಿ 8 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಭೋರ್ಘಾಟ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು (ಶನಿವಾರ) ಮುಂಜಾನೆ ಸಂಭವಿಸಿದ ಅಪಘಾತದಲ್ಲಿ 18 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದರಲ್ಲಿ ಎಂಟು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಯಗಢ ಜಿಲ್ಲೆಯ ಖೋಪೋಲಿ ಬಳಿಯ ಭೋರ್ಘಾಟ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಖೋಪೋಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಗಾಯಾಳುಗಳನ್ನು ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನ ಚಾಲಕ ಸ್ಟೀರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos