ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಖೋಪೋಲಿ ಬಳಿ ಟ್ರಕ್‌ಗೆ ಬಸ್ ಡಿಕ್ಕಿ; 18 ಮಂದಿಗೆ ಗಾಯ

Updated on: Nov 09, 2024 | 4:40 PM

ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದರಲ್ಲಿ 8 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಭೋರ್ಘಾಟ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು (ಶನಿವಾರ) ಮುಂಜಾನೆ ಸಂಭವಿಸಿದ ಅಪಘಾತದಲ್ಲಿ 18 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದರಲ್ಲಿ ಎಂಟು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಯಗಢ ಜಿಲ್ಲೆಯ ಖೋಪೋಲಿ ಬಳಿಯ ಭೋರ್ಘಾಟ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಖೋಪೋಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಗಾಯಾಳುಗಳನ್ನು ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನ ಚಾಲಕ ಸ್ಟೀರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More