ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು; ವಿಡಿಯೋ ವೈರಲ್
ಮುಂಬೈ ನಗರದಲ್ಲಿ ನಿರಂತರ ಭಾರೀ ಮಳೆಯ ನಡುವೆಯೂ ಮಾಟುಂಗಾದಲ್ಲಿ ಪ್ರವಾಹದಿಂದ ತುಂಬಿದ್ದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ಶಾಲಾ ಬಸ್‌ನಿಂದ ಮುಂಬೈ ಪೊಲೀಸರು ಶಾಲಾ ಮಕ್ಕಳನ್ನು ರಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಹದಿಂದ ತುಂಬಿದ್ದ ರಸ್ತೆಯಲ್ಲಿ ಆತಂಕದಿಂದ ಕಾಯುತ್ತಿದ್ದ ಶಾಲಾ ಮಕ್ಕಳನ್ನು ಪೊಲೀಸ್ ಸಿಬ್ಬಂದಿ ಬಸ್‌ನಿಂದ ಹೊರಗೆ ಕರೆದುಕೊಂಡು ಬಂದಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಇನ್ನೆರಡು ದಿನ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂಬೈ, ಆಗಸ್ಟ್ 18: ಮಹಾರಾಷ್ಟ್ರದ ಮುಂಬೈನಲ್ಲಿ (Mumbai Rains) ಭಾರೀ ಮಳೆಯಾಗುತ್ತಿದೆ. ಮುಂಬೈ ನಗರದಲ್ಲಿ ನಿರಂತರ ಭಾರೀ ಮಳೆಯ ನಡುವೆಯೂ ಮಾಟುಂಗಾದಲ್ಲಿ ಪ್ರವಾಹದಿಂದ (Mumbai Flood) ತುಂಬಿದ್ದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ಶಾಲಾ ಬಸ್‌ನಿಂದ ಮುಂಬೈ ಪೊಲೀಸರು ಶಾಲಾ ಮಕ್ಕಳನ್ನು ರಕ್ಷಿಸುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಪ್ರವಾಹದಿಂದ ತುಂಬಿದ್ದ ರಸ್ತೆಯಲ್ಲಿ ಆತಂಕದಿಂದ ಕಾಯುತ್ತಿದ್ದ ಶಾಲಾ ಮಕ್ಕಳನ್ನು ಪೊಲೀಸ್ ಸಿಬ್ಬಂದಿ ಬಸ್‌ನಿಂದ ಹೊರಗೆ ಕರೆದುಕೊಂಡು ಬಂದಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಇನ್ನೆರಡು ದಿನ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Aug 18, 2025 09:40 PM