AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ: ಶ್ರೀಗಳ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ: ಶ್ರೀಗಳ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಪ್ರಶಾಂತ್​ ಬಿ.
| Edited By: |

Updated on:Jun 23, 2026 | 2:23 PM

Share

Mummadi Nirvana Swamiji: ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಅವರು ವಯೋಸಹಜ ಕಾಯಿಲೆಯಿಂದ ಲಿಂಗೈಕ್ಯರಾಗಿದ್ದಾರೆ. ಕನಕಪುರದ ದೇಗುಲ ಮಠಕ್ಕೆ ತೆರಳಿ ಸಿಎಂ ಡಿಕೆ ಶಿವಕುಮಾರ್ ಮತ್ತು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಶ್ರೀಗಳ ಅಂತಿಮ ದರ್ಶನ ಪಡೆದಿದ್ದು, ಈ ವೇಳೆ ಮುಖ್ಯಮಂತ್ರಿ ಡಿಕೆಶಿ ಭಾವುಕಾರದ ಪ್ರಸಂಗ ನಡೆದಿದೆ.

ರಾಮನಗರ, ಜೂನ್​​ 23: ವಯೋಸಹಜ ಕಾಯಿಲೆಯಿಂದ ಲಿಂಗೈಕ್ಯರಾಗಿರುವ ಕನಕಪುರದ ದೇಗುಲ ಮಠದ ಮಠಾಧೀಶರಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಅವರ ಅಂತಿಮ ದರ್ಶನವನ್ನು ಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್​​ ಖಂಡ್ರೆ ಮತ್ತು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾದುಕೆಗಳಿಗೆ ನಮಸ್ಕರಿಸಿ ಭಾವುಕರಾದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 23, 2026 01:59 PM

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More