Video: ಮುಂಡುಗಾರು: ನಕ್ಸಲ್​ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಪೇಜಾವರ ಶ್ರೀ

Video: ಮುಂಡುಗಾರು: ನಕ್ಸಲ್​ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಪೇಜಾವರ ಶ್ರೀ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ನಯನಾ ರಾಜೀವ್

Updated on:Dec 15, 2024 | 8:32 AM

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಪೇಜಾವರ ಶ್ರೀಗಳು ನಕ್ಸಲ್ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಶನಿವಾರ ಪೇಜಾವರ ಶ್ರೀಗಳು ಚಿಕ್ಕಮಗಳೂರಿನ ಮುಂಡುಗಾರಿಗೆ ಭೇಟಿ ನೀಡಿದಾಗ ಅಲ್ಲಿನ ಗ್ರಾಮಸ್ಥರು ಭಕ್ತಿ ಆದರದಿಂದ ಬರಮಾಡಿಕೊಂಡರು. ಮೈಲುದೂರ ನೂರಾರು ಮಹಿಳೆಯರು, ಪುರುಷರು ರಾಮಮಂತ್ರ ಘೋಷ ಭಜನೆಗಳೊಂದಿಗೆ ಪೂರ್ಣ ಕುಂಭಗಳ ಸಹಿತ ಶ್ರೀಗಳವರನ್ನು ಕಾಲ್ನಡಿಗೆಯಲ್ಲಿ ವನಮೆರವಣಿಗೆ ನಡೆಸಿ ಬರಮಾಡಿಕೊಂಡರು. ಗಿರಿಜನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಶ್ವಪ್ರಸನ್ನ ಶ್ರೀಗಳು, ಗಿರಿಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈ ಗ್ರಾಮವು ಮೂಲಸೌಕರ್ಯಗಳಿಂದ ವಂಚಿತವಾಗಿದೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಪೇಜಾವರ ಶ್ರೀಗಳು ನಕ್ಸಲ್ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಶನಿವಾರ ಪೇಜಾವರ ಶ್ರೀಗಳು ಚಿಕ್ಕಮಗಳೂರಿನ ಮುಂಡುಗಾರಿಗೆ ಭೇಟಿ ನೀಡಿದಾಗ ಅಲ್ಲಿನ ಗ್ರಾಮಸ್ಥರು ಭಕ್ತಿ ಆದರದಿಂದ ಬರಮಾಡಿಕೊಂಡರು. ಮೈಲುದೂರ ನೂರಾರು ಮಹಿಳೆಯರು, ಪುರುಷರು ರಾಮಮಂತ್ರ ಘೋಷ ಭಜನೆಗಳೊಂದಿಗೆ ಪೂರ್ಣ ಕುಂಭಗಳ ಸಹಿತ ಶ್ರೀಗಳವರನ್ನು ಕಾಲ್ನಡಿಗೆಯಲ್ಲಿ ವನಮೆರವಣಿಗೆ ನಡೆಸಿ ಬರಮಾಡಿಕೊಂಡರು.
ಗಿರಿಜನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಶ್ವಪ್ರಸನ್ನ ಶ್ರೀಗಳು, ಗಿರಿಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈ ಗ್ರಾಮವು ಮೂಲಸೌಕರ್ಯಗಳಿಂದ ವಂಚಿತವಾಗಿದೆ.
ಮುಂದಿನ ದಿನಗಳಲ್ಲೂ ಶ್ರೀಮಠ ಗಿರಿಜನ ಬಂಧುಗಳ ನೆಮ್ಮದಿಯ ಬದುಕಿಗೆ ಸದಾ ಸ್ಪಂದಿಸಲಿದೆ. ಮಕ್ಕಳಿಗೆ ಸಾಧ್ಯವಾದಷ್ಟು ಉತ್ತಮ ಶಿಕ್ಷಣ, ಸಂಸ್ಕಾರಗಳನ್ನು ನೀಡಿ ಬೆಳೆಸುವಂತೆಯೂ ಶ್ರೀಗಳು ಕಿವಿಮಾತು ಹೇಳಿ ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Dec 15, 2024 08:32 AM