ಪುಂಡಾಟ ಮಾಡುತ್ತಿದ್ದ ಎಮ್ಮೆ ಕಟ್ಟಿಹಾಕಲು ಜೆಸಿಬಿಯೇ ಬರಬೇಕಾಯ್ತು!

Edited By:

Updated on: Feb 13, 2025 | 9:41 PM

ಯಃಕಶ್ಚಿತ್ ಎಮ್ಮೆಯೊಂದನ್ನು ಕಟ್ಟಿಹಾಕಲು ಜೆಸಿಬಿ ಬೇಕಾಯ್ತೇ? ಹೌದು, ಮುದ್ದೇಬಿಹಾಳ ಪಟ್ಟಣ ಇಂಥದ್ದೊಂದು ವಿಚಿತ್ರ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಿಕ್ಕ ಸಿಕ್ಕ ಜನರಿಗೆ ತಿವಿದು, ವಾಹನಗಳಿಗೆ ಗುದ್ದಿ ಓಡುತ್ತಿದ್ದ ಎಮ್ಮೆಯನ್ನು ಕೊನೆಗೂ ಕಟ್ಟಿಹಾಕಿ ಜನ ನಿಟ್ಟುಸಿರುಬಿಟ್ಟರು. ಎಮ್ಮೆ ಸೆರೆ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ ನೋಡಿ.

ವಿಜಯಪುರ, ಫೆಬ್ರವರಿ 13: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿ ಎಮ್ಮೆಯೊಂದು ಮದವೇರಿ ಜನರಿಗೆ ತೊಂದರೆ ಕೊಡುತ್ತಿದ್ದುದಲ್ಲದೆ ಕಟ್ಟಿಹಾಕಲೂ ಬಿಡದೆ ತಪ್ಪಿಸಿಕೊಳ್ಳುತ್ತಿತ್ತು. ಜನರಿಗೆ, ಸಂಚಾರ ಮಾಡುತ್ತಿದ್ದ ವಾಹನಗಳಿಗೆ ಗುದ್ದಿ ಓಡುತ್ತಿದ್ದ ಎಮ್ಮೆಯನ್ನು ಕಟ್ಟಿಹಾಕಲು ಕೊನೆಗೂ ಜೆಸಿಬಿಯನ್ನೇ ತರಬೇಕಾಯ್ತು! ಮುದ್ದೇಬಿಹಾಳ ಹಳೆಯ ಸರ್ಕಾರಿ ಆಸ್ಪತ್ರೆ ಆವರಣಕ್ಕೆ ಎಮ್ಮೆ ಪ್ರವೇಶ ಮಾಡಿತ್ತು. ಅಲ್ಲೇ ಗೇಟ್ ಹಾಕಿ ಪುರಸಭೆ ಅಧ್ಯಕ್ಷ ಹಾಗೂ ಸಿಬ್ಬಂದಿ ಜೆಸಿಬಿ ತರಿಸಿ ಎಮ್ಮೆ ಸೆರೆ ಹಿಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More