Karnataka Assembly Polls; ಮುನಿರತ್ನ ನಾಯ್ಡು ಕನ್ನಡಿಗರ ವಿರುದ್ಧ ತಮಿಳು ಭಾಷಿಕರನ್ನು ಎತ್ತಿಕಟ್ಟುತ್ತಿದ್ದಾರೆ: ಕುಸುಮ, ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 31, 2023 | 4:41 PM

ಬಿಜೆಪಿ ಸರ್ಕಾರ ಅಡಳಿತ ನಡೆಸಲಾರಂಭಿಸಿದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತ ಕುಸುಮ ಹೇಳಿದರು

ಬೆಂಗಳೂರು: ನಗರದ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಕುಸುಮ, ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು (Munirathna Naidu) ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಆರೋಪ ಮಾಡುತ್ತಿದ್ದಾರೆ. ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಕುಸುಮ (Kusuma), ಆರ್ ಅರ್ ನಗರದಲ್ಲಿರುವ (RR Nagar) ತಮಿಳು ಭಾಷಿಕರನ್ನು ಕನ್ನಡಿಗರ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಮತ್ತು ಪ್ರಚೋದನಕಾರಿ ಹೇಳಿಕೆಗಳ ಮೂಲಕ ಅತಂಕಮಯ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದರು. ಬಿಜೆಪಿ ಸರ್ಕಾರ ಅಡಳಿತ ನಡೆಸಲಾರಂಭಿಸಿದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತ ಕುಸುಮ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 31, 2023 04:40 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.