AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ: ವೆಬ್ ಸೈಟ್ ಅನಾವರಣ

ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ: ವೆಬ್ ಸೈಟ್ ಅನಾವರಣ

ಹರೀಶ್ ಜಿ.ಆರ್​.
| Edited By: |

Updated on:Sep 11, 2026 | 2:42 PM

Share

ಸಚಿವ ಮುನಿಯಪ್ಪ ಅವರು ಇಂದು (ಸೆಪ್ಟೆಂಬರ್ 11 ಕೇಂದ್ರ ಪರಿಹಾರ ಸಮಿತಿಯ ವೆಬ್​ಸೈಟ್ ಅನಾವರಣಗೊಳಿಸಿದರು. ವೆಬ್​ಸೈಟ್ ನಿರಾಶ್ರಿತರ ಪರಿಹಾರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೆ. ಭಿಕ್ಷಾಟನೆ ತಡೆ, ಆಶ್ರಯ, ಆರೋಗ್ಯ ಹಾಗೂ ಕೌಶಲ್ಯಾಭಿವೃದ್ಧಿ ವಿಷಯಗಳು ವೆಬ್​ಸೈಟ್​ನಲ್ಲಿ ಇರಲಿವೆ. ಸಮಾಜದಲ್ಲಿ ಭಿಕ್ಷಾಟನೆ ತಡೆಯುವುದು ಇದರ ಉದ್ದೇಶವಾಗಿದೆ.

ಬೆಂಗಳೂರು, (ಸೆಪ್ಟೆಂಬರ್ 11): ಸಚಿವ ಮುನಿಯಪ್ಪ ಅವರು ಇಂದು (ಸೆಪ್ಟೆಂಬರ್ 11 ಕೇಂದ್ರ ಪರಿಹಾರ ಸಮಿತಿಯ ವೆಬ್​ಸೈಟ್ ಅನಾವರಣಗೊಳಿಸಿದರು. ವೆಬ್​ಸೈಟ್ ನಿರಾಶ್ರಿತರ ಪರಿಹಾರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೆ. ಭಿಕ್ಷಾಟನೆ ತಡೆ, ಆಶ್ರಯ, ಆರೋಗ್ಯ ಹಾಗೂ ಕೌಶಲ್ಯಾಭಿವೃದ್ಧಿ ವಿಷಯಗಳು ವೆಬ್​ಸೈಟ್​ನಲ್ಲಿ ಇರಲಿವೆ. ಸಮಾಜದಲ್ಲಿ ಭಿಕ್ಷಾಟನೆ ತಡೆಯುವುದು ಇದರ ಉದ್ದೇಶವಾಗಿದೆ. ಈ ವೇಳೆ ಮಾತನಾಡಿದ ಮುನಿಯಪ್ಪ, ರಾಜ್ಯದಲ್ಲಿ ನಾಲ್ಕು ಸಾವಿರ ಭಿಕ್ಷಾಟನೆ ಮಾಡುವವರಿದ್ದಾರೆ. ಬೆಂಗಳೂರಿನಲ್ಲಿ ಸಾವಿರ ಜನ ಭಿಕ್ಷಾಟನೆ ಮಾಡ್ತಿರುವ ಮಾಹಿತಿ ಇದೆ. ಭಿಕ್ಷಾಟನೆ ಇದ್ದರೆ ಇಡೀ ದೇಶವೇ ತಲೆತಗ್ಗಿಸಬೇಕಾಗುತ್ತೆ. ಭಿಕ್ಷಾಟನೆ ಮಾಡದಂತೆ ಮನಸ್ಸು ಪರಿವರ್ತಿಸಬೇಕಾಗುತ್ತೆ. ಭಿಕ್ಷಾಟನೆ ಮುಕ್ತ ಕರ್ನಾಟಕ ಮಾಡಲು ಹೊರಟಿದ್ದೇವೆ. ಸಮಾಜದಲ್ಲಿ ಬೆರೆತು ಜೀವನ ಮಾಡುವಂತಾಗಬೇಕು. ಹೊಸ ವಾತಾವರಣ ನಿರ್ಮಿಸಬೇಕಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 11, 2026 02:41 PM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More