ಹೈಕೋರ್ಟ್‌ನಿಂದ ಜಾಮೀನು ಬೆನ್ನಲ್ಲೇ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

Edited By:

Updated on: May 22, 2026 | 6:36 AM

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ನಾಗ, ನಟ ದರ್ಶನ್ ಜೊತೆಗಿನ ಫೋಟೋ ವೈರಲ್ ಆದ ನಂತರ ಬೆಂಗಳೂರಿನಿಂದ ಹಿಂಡಲಗಾ ಜೈಲಿಗೆ ವರ್ಗಾವಣೆಯಾಗಿದ್ದ. ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ನಂತರ, ಅನಾರೋಗ್ಯದ ಕಾರಣ ಬಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.

ಬೆಳಗಾವಿ, ಮೇ 22: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗನನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಚಹಾ ಸೇವಿಸುತ್ತಿರುವ ನಾಗನ ಫೋಟೋ ವೈರಲ್ ಆಗಿತ್ತು. ಈ ಘಟನೆಯ ನಂತರ, ಜೈಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ 2024ರ ಜುಲೈನಲ್ಲಿ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ನಾಗ ಈಗ ಬಿಡುಗಡೆಯಾಗಿದ್ದಾನೆ. ಅನಾರೋಗ್ಯದ ಕಾರಣ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ನಾಗ, ಅಲ್ಲಿಂದ ಸ್ವಂತ ವಾಹನದಲ್ಲಿ ತೆರಳಿದ್ದಾನೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More