ನಟ ದರ್ಶನ ಬಂಧನ: ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಿಷ್ಟು
ಚಂದನವನದ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿನ ಱಡಿಸನ್ ಹೋಟೆಲ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ ಅವರ ಗೆಳತಿ ಪವಿತ್ರಾ ಗೌಡ ಅವರನ್ನೂ ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು.
ಬೆಂಗಳೂರು, ಜೂನ್ 11: ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಅವರನ್ನು ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿಚಾರಣೆ ವೇಳೆ ನಟ ದರ್ಶನ್ ಹೆಸರು ಬಂದಿದೆ. ತನಿಖೆ ಆಗುವವರೆಗೂ ಕೂಡ ಏನು ಹೇಳುವುದಕ್ಕೆ ಆಗಲ್ಲ. ನಟ ದರ್ಶನ್ ನೇರವಾಗಿ ಭಾಗಿಯಾಗಿದ್ದಾರಾ, ಇಲ್ಲವೋ? ಯಾವ ಕಾರಣಕ್ಕೆ ಮರ್ಡರ್ ಆಗಿದೆ ಎಂಬ ಕುರಿತು ತನಿಖೆ ನಡೆಯುತ್ತಿದೆ. ನಟ ದರ್ಶನ್ ಹೆಸರು ಏಕೆ ಬಂದಿದೆ ಅಂತ ತನಿಖೆ ಬಳಿಕ ತಿಳಿಯುತ್ತೆ. ಈ ಸಂದರ್ಭದಲ್ಲಿ ಬೇರೆ ಏನು ಹೇಳುವುದಕ್ಕೆ ಸಾಧ್ಯವಿಲ್ಲ. ತನಿಖೆ ಆದ ಮೇಲೆ ಎಲ್ಲವೂ ಗೊತ್ತಾಗುತ್ತೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಏನಿದು ಪ್ರಕರಣ
ಚಿತ್ರದುರ್ಗ ಮೂಲದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಎಂಬುವನು ನಟ ದರ್ಶನ ಗೆಳತಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಮೇಸೆಜ್, ಫೋಟೋ ಕಳಸಿದ್ದನು. ಈ ಹಿನ್ನೆಲೆಯಲ್ಲಿ ಜೂನ್ 9 ರಂದು ರೇಣುಕಾಸ್ವಮಿ ಅವರನ್ನು ಆರೋಪಿಗಳು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪಟ್ಟಣಗೆರೆಯಲ್ಲಿರುವ ಶೇಡ್ನಲ್ಲಿ ಆರೋಪಿಗಳು ಅತ್ಯಂತ ಕ್ರೂರವಾಗಿ ಹಿಂಸೆ ನೀಡಿದ್ದಾರೆ. ಕಾದ ಕಬ್ಬಿಣದ ಸಲಾಕೆಯಿಂದ ರೇಣುಕಸ್ವಾಮಿ ಅವರ ಬರೆ ಹಾಕಿದ್ದಾರೆ. ಬಳಿಕ ರೇಣುಕಾಸ್ವಾಮಿ ಅವರ ಗುಪ್ತಾಂಗಕ್ಕೆ ಹಲವು ಬಾರಿ ಒದ್ದು ಹಲ್ಲೆ ಮಾಡಿದ್ದಾರೆ. ನಂತರ ತಲೆಗೆ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ರೇಣುಕಾಸ್ವಾಮಿ ದೇಹದ ಮೇಲೆ ಸುಟ್ಟಿರುವ ಗಾಯಗಳಿವೆ. ಮೃತ ರೇಣುಕಾಸ್ವಾಮಿ ಕೂಡ ದರ್ಶನ ಅಭಿಮಾನಿಯಾಗಿದ್ದರು.
ಇದನ್ನೂ ಓದಿ: ಮೋರಿಯಲ್ಲಿದ್ದ ಶವ ಎಳೆದಾಡಿದ್ದ ನಾಯಿಗಳು: ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದೇ ಹೀಗೆ!
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಘು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ರಘು ಮೃತ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದಿದ್ದನು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 11, 2024 01:26 PM
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
