ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಬಂಧನ
ಚಂದನವನದ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿನ ರ‍್ಯಾಡಿಸನ್ ಹೋಟೆಲ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಟ ದರ್ಶನ್ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ.
ಮೈಸೂರು, ಜೂನ್ 11: ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ (Actor Darshan) ಅವರನ್ನು ಮೈಸೂರಿನ ರ‍್ಯಾಡಿಸನ್ ಹೋಟೆಲ್ನಲ್ಲಿ ವಿಜಯನಗರ ಎಸಿಪಿ ಚಂದನ್ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಜನರನ್ನು ಬೆಳಗ್ಗೆ 8.30ಕ್ಕೆ ಬಂಧಿಸಿ ಪೊಲೀಸರು ಕರೆದೊಯ್ದಿದ್ದಾರೆ. ಚಿತ್ರದುರ್ಗ ಮೂಲದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಎಂಬುವನು ನಟ ದರ್ಶನ ಗೆಳತಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಮೇಸೆಜ್, ಫೋಟೋ ಕಳಸಿದ್ದನು. ಈ ಹಿನ್ನೆಲೆಯಲ್ಲಿ ಜೂನ್ 9 ರಂದು ರೇಣುಕಾಸ್ವಮಿ ಅವರನ್ನು ಕಾಮಾಕ್ಷಿಪಾಳ್ಯದಲ್ಲಿ ಕೊಲೆ ಮಾಡಲಾಗಿತ್ತು.
ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಕರಣ ತನಿಖೆ ನಡೆಸಿದ್ದು, ಮೊದಲು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇವರನ್ನು ವಿಚಾರಣೆ ನಡೆಸಿದಾಗ ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲದೆ ಘಟನೆ ನಡೆಯುವ ವೇಳೆ ಸ್ಥಳದಲ್ಲಿ ನಟ ದರ್ಶನ್ ಕೂಡ ಇದ್ದರು ಎಂಬ ಮಾಹಿತಿ ಪೊಲೀಸರಿಗೆ ತಿಳಿದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಪೊಲೀಸರು ಆರೋಪಿ ನಟ ದರ್ಶನನ್ನು ಬಂಧಿಸಿದ್ದರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ