ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪವಿತ್ರ ಗೌಡ ವಿಚಾರಣೆ
ಚಂದನವನದ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿನ ಱಡಿಸನ್ ಹೋಟೆಲ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ ಅವರ ಗೆಳತಿ ಪವಿತ್ರಾ ಗೌಡ ಅವರನ್ನೂ ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು, ಜೂನ್ 11: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ (Darshan) ಸೇರಿದಂತೆ 10 ಜನರನ್ನು ಪೊಲೀಸರು (Police) ಬಂಧಿಸಿದ್ದಾರೆ. ಅಲ್ಲದೆ ನಟ ದರ್ಶನ ಗೆಳತಿ ಪವಿತ್ರಾ ಗೌಡ (Pavitra Gowda) ಅವರನ್ನೂ ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಪೊಲೀಸರು ಪವಿತ್ರಾಗೌಡ ಅವರನ್ನು ಅನ್ನಪೂರ್ಣೇಶ್ವರಿ ಠಾಣೆಗೆ ಕರೆ ತಂದಿದ್ದಾರೆ. ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ನಟ ದರ್ಶನ್, ಪವಿತ್ರಾ ಸೇರಿ ನಾಲ್ವರ ವಿಚಾರಣೆ ನಡೆಯುತ್ತಿದೆ. ಇನ್ನುಳಿದ ಆರೋಪಿಗಳನ್ನು ಪೊಲೀಸರು ಕಾಮಾಕ್ಷಿಪಾಳ್ಯ ಠಾಣೆಗೆ ಕರೆದೊಯ್ದಿದ್ದಾರೆ.
ಚಿತ್ರದುರ್ಗ ಮೂಲದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಎಂಬುವನು ನಟ ದರ್ಶನ ಗೆಳತಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಮೇಸೆಜ್, ಫೋಟೋ ಕಳಸಿದ್ದನು. ಈ ಹಿನ್ನೆಲೆಯಲ್ಲಿ ಜೂನ್ 9 ರಂದು ರೇಣುಕಾಸ್ವಮಿ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪಟ್ಟಣಗೆರೆಯಲ್ಲಿರುವ ಶೇಡ್ನಲ್ಲಿ ಆರೋಪಿಗಳು ಅತ್ಯಂತ ಕ್ರೂರವಾಗಿ ಹಿಂಸೆ ನೀಡಿದ್ದಾರೆ. ಕಾದ ಕಬ್ಬಿಣದ ಸಲಾಕೆಯಿಂದ ರೇಣುಕಸ್ವಾಮಿ ಅವರ ಬರೆ ಹಾಕಿದ್ದಾರೆ. ಬಳಿಕ ರೇಣುಕಾಸ್ವಾಮಿ ಅವರ ಗುಪ್ತಾಂಗಕ್ಕೆ ಹಲವು ಬಾರಿ ಒದ್ದು ಹಲ್ಲೆ ಮಾಡಿದ್ದಾರೆ. ನಂತರ ತಲೆಗೆ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ರೇಣುಕಾಸ್ವಾಮಿ ದೇಹದ ಮೇಲೆ ಸುಟ್ಟಿರುವ ಗಾಯಗಳಿವೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ವಾಮಿ ಅವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ಇದನ್ನೂ ಓದಿ: ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆತಂದಿದ್ದು ಹೇಗೆ? ಕೊಲೆಯಾದಾಗ ಸ್ಥಳದಲ್ಲಿ ಇದ್ದವರ್ಯಾರು?
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ವಿನಯ್.ವಿ, ನಾಗರಾಜು ಆರ್, ಲಕ್ಷ್ಮಣ್.ಎಂ, ಪ್ರದೋಶ್, ಪವನ್.ಕೆ, ದೀಪಕ್ ಕುಮಾರ್.ಎಂ, ನಂದೀಶ್, ಕಾರ್ತಿಕ್ ನಿಕಿಲ್ ನಾಯಕ್, ರಾಘವೇಂದ್ರ, ಕೇಶವ ಮೂರ್ತಿ ಬಂಧಿತ ಆರೋಪಿಗಳು.
ಪೊಲೀಸರ ವಿಚಾರಣೆ ವೇಳೆ ನಟ ದರ್ಶನ ಘಟನೆ ವೇಳೆ ನಾನು ಸ್ಥಳದಲ್ಲಿ ಇರಲಿಲ್ಲ. ಆದರೆ
ಘಟನೆ ನಡೆಯುವ ವೇಳೆ ಸ್ಥಳದಲ್ಲಿ ನಟ ದರ್ಶನ್ ಇದ್ದರು ಎಂದು ಉಳಿದ ಆರೋಪಿಗಳು ಹೇಳಿದರು. ಕೊಲೆ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ