ಕೊಲೆಯಾದ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಕುರಿತು ಕಮಿಷನರ್​ ಹೇಳಿದ್ದಿಷ್ಟು

|

Updated on: Jun 18, 2024 | 12:48 PM

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತಿರುವ ಚಂದನವನದ ಸ್ಟಾರ್​ ನಟ ದರ್ಶನ್ ಅವರನ್ನು ಮೈಸೂರಿನ ರ‍್ಯಾಡಿಸನ್​ ಹೋಟೆಲ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ನಟ ದರ್ಶನ ಮತ್ತು ಇವರ ಗೆಳತಿ ಪವಿತ್ರ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸ್​ ಆಯುಕ್ತ ಬಿ.ದಯಾನಂದ್​ ಸುದ್ದಿಗೋಷ್ಠಿ ನಡೆಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿ (Chitradurga Renukaswamy) ಕೊಲೆ ಪ್ರಕರಣದ ಆರೋಪ ಹೊತ್ತಿರುವ ಚಂದನವನದ ಸ್ಟಾರ್​ ನಟ ದರ್ಶನ್ (Actor Darshan) ಅವರನ್ನು ಮೈಸೂರಿನ ರ‍್ಯಾಡಿಸನ್​ ಹೋಟೆಲ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ನಟ ದರ್ಶನ ಮತ್ತು ಇವರ ಗೆಳತಿ ಪವಿತ್ರ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಹಲವು ಸಾಕ್ಷಿಗಳು ಲಭ್ಯವಾಗಿವೆ. ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್​ ಆಯುಕ್ತ ಬಿ. ದಯಾನಂದ್ (Commissioner B Dayanand)​ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ಮಾಧ್ಯಮದವರು ಕೇಳಿದ ರೇಣುಕುಮಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಬಂತಾ ಪ್ರಶ್ನೆಗೆ ಉತ್ತರಿಸಿದ ಅವರು “ಇದೆಲ್ಲ ತನಿಖೆಯ ಭಾಗ, ಅವುಗಳನ್ನು ಹೇಳಲು ಆಗಲ್ಲ ಎಂದರು. ಇನ್ನು ಕೊಲೆಗೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಕಾರಣ ಈಗಾಗಲೆ ನಿಮ್ಮಲ್ಲಿ ಈಗಾಗಲೆ ಬಂದಿದೆಯಲ್ಲ” ಎಂದು ಹೇಳಿದರು. ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆಯಾ “ಇದೆಲ್ಲವೂ ತನಿಖೆಯ ಭಾಗ ಹೇಳಲು ಆಗುವುದಿಲ್ಲ” ಎಂದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ: ಸ್ವಲ್ಪ ನಿರ್ಲಕ್ಷ್ಯಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು; ಬಿ ದಯಾನಂದ್​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ