ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ: 25 ಕೋಟಿ ನಾಗರಿಕರು ಬಡತನದ ರೇಖೆಯಿಂದ ಹೊರಬಂದಿದ್ದಾರೆ

Updated on: Jan 28, 2026 | 11:54 AM

ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಡಾ. ಅಂಬೇಡ್ಕರ್ ಆಶಯಗಳನ್ನು ಸ್ಮರಿಸಿ, ಸಾಮಾಜಿಕ ನ್ಯಾಯದ ಮಹತ್ವವನ್ನು ಒತ್ತಿಹೇಳಿದರು. ಕಳೆದ ದಶಕದಲ್ಲಿ ಸರ್ಕಾರದ ಯೋಜನೆಗಳಿಂದ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದು, ಭಾರತ ಶೀಘ್ರದಲ್ಲೇ 3ನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ ಎಂದು ತಿಳಿಸಿದರು. 'ಲಖ್ಪತಿ ದೀದಿ' ಮತ್ತು ಮಹಿಳಾ ಮೀಸಲಾತಿ ಮಹಿಳೆಯರ ಜೀವನವನ್ನು ಬದಲಾಯಿಸುತ್ತಿವೆ ಎಂದು ಅವರು ಉಲ್ಲೇಖಿಸಿದರು.

ದೆಹಲಿ, ಜ.28: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 28, 2026) ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣ ಮಾಡಿದ್ದಾರೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಸ್ಮರಿಸಿದರು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತಾರತಮ್ಯವಿಲ್ಲದೆ ಸಮಾನ ಹಕ್ಕುಗಳನ್ನು ನೀಡಿದೆ. ಸಾಮಾಜಿಕ ನ್ಯಾಯವು ಕೇವಲ ಘೋಷಣೆಯಾಗಬಾರದು, ಅದು ಪ್ರತಿಯೊಬ್ಬರಿಗೂ ತಲುಪಬೇಕು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ಅವರು ತಿಳಿಸಿದರು. ಕಳೆದ ಒಂದು ದಶಕದ ಪ್ರಗತಿಯನ್ನು ಉಲ್ಲೇಖಿಸಿದ ರಾಷ್ಟ್ರಪತಿಗಳು ಒಂದು ಮಹತ್ವದ ಅಂಕಿಅಂಶವನ್ನು ಹಂಚಿಕೊಂಡರು. ಕಳೆದ 10 ವರ್ಷಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲವಾಗಿ 25 ಕೋಟಿ ನಾಗರಿಕರು ಬಡತನದ ರೇಖೆಯಿಂದ ಹೊರಬಂದಿದ್ದಾರೆ. ಬಡವರನ್ನು ಸಶಕ್ತಗೊಳಿಸುವ ಕಾರ್ಯಕ್ರಮಗಳು ಈಗ ಮೊದಲಿಗಿಂತ ಹೆಚ್ಚಿನ ವೇಗದಲ್ಲಿ ಸಾಗುತ್ತಿವೆ. ಭಾರತವು ಶೀಘ್ರದಲ್ಲೇ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುವ ಹಾದಿಯಲ್ಲಿದೆ. ‘ಲಖ್ಪತಿ ದೀದಿ’ ಮತ್ತು ಮಹಿಳಾ ಮೀಸಲಾತಿಯಂತಹ ಕ್ರಮಗಳು ಮಹಿಳೆಯರ ಜೀವನವನ್ನು ಬದಲಿಸುತ್ತಿವೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 28, 2026 11:52 AM