ದಾವಣಗೆರೆ: ಜೈಲಿನಿಂದ ಬಂದ ಮುರುಘಾಶ್ರೀ ವಾಸ್ತವ್ಯ ಎಲ್ಲಿ?

Edited By: ಕಿರಣ್ ಹನುಮಂತ್​ ಮಾದಾರ್

Updated on: Nov 16, 2023 | 8:24 PM

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ನ.16) ಜೈಲಿನಿಂದ ಮುರಘಾ ಶರಣರು(Murugha Math Swamiji) ಬಿಡುಗಡೆಯಾಗಿದ್ದಾರೆ. ಈ ವೇಳೆ ದಾವಣಗೆರೆ(Davanagere)ಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಭಾವುಕರಾಗಿ ಮಾತನಾಡಿದ ಅವರು ‘ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದರು.

ದಾವಣಗೆರೆ, ನ.16: ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ನ.16) ಜೈಲಿನಿಂದ ಮುರಘಾ ಶರಣರು(Murugha Math Swamiji) ಬಿಡುಗಡೆಯಾಗಿದ್ದಾರೆ. ಈ ವೇಳೆ ದಾವಣಗೆರೆ(Davanagere)ಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಭಾವುಕರಾಗಿ ಮಾತನಾಡಿದ ಅವರು ‘ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದರು. ಇನ್ನು ಚಿತ್ರದುರ್ಗಕ್ಕೆ ನಿರ್ಬಂಧ ಹಿನ್ನಲೆ ದಾವಣಗೆರೆ ವಿರಕ್ತಮಠದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ವಿರಕ್ತಮಠದಲ್ಲಿ ಇರುವ ಸ್ವಾಮೀಜಿಗಳ ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದ್ದು, ಅಲ್ಲೆ ಇರಲು ತೀರ್ಮಾನಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Nov 16, 2023 08:24 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More