Nirani Vs Yatnal: ನನ್ನ ತಂಟೆಗೆ ಬಂದ್ರೆ ಪರಿಣಾಮ ನೆಟ್ಟಗಿರಲ್ಲ ಅಂತ ಪರೋಕ್ಷವಾಗಿ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ಮುರುಗೇಶ್ ನಿರಾಣಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 26, 2023 | 4:43 PM

ನಿರಾಣಿ ಯತ್ನಾಳ್​ಗೆ ಬಯ್ಯುವುದು ಯತ್ನಾಳ್ ನಿರಾಣಿಯನ್ನು ಹೀಯಾಳಿಸುವುದು ಬಹಳ ದಿನಗಳಿಂದ ಜಾರಿಯಲ್ಲಿದೆ.

ಬಾಗಲಕೋಟೆ: ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ನಡುವಿನ ತಗಾದೆ-ತಂಟೆ ಎಲ್ಲ ಕನ್ನಡಿಗರಿಗೆ ಗೊತ್ತು. ಅವರು ಇವರಿಗೆ ಬಯ್ಯುವುದು ಇವರು ಅವರನ್ನು ಹೀಯಾಳಿಸುವುದು ಬಹಳ ದಿನಗಳಿಂದ ಜಾರಿಯಲ್ಲಿದೆ. ಇಂದು ಬಾಗಲಕೋಟೆ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತಾಡಿದ ನಿರಾಣಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನೇತೃತ್ವದಲ್ಲಿ ಭಾರತ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದೆ, ಭಾರತ ಇಂದು ವಿಶ್ವದ 5 ನೇ ದೊಡ್ಡ ಎಕಾನಮಿ ಎನಿಸಿಕೊಂಡಿದೆ ಎಂದು ಹೇಳುತ್ತಲೇ ತಮ್ಮ ಬದ್ಧ ರಾಜಕೀಯ ವೈರಿ ಯತ್ನಾಳ್ ಗೆ ಒಂದು ಎಚ್ಚರಿಕೆಯನ್ನು ರವಾನಿಸಿದರು. ಯತ್ನಾಳ್ ಹೆಸರು ಉಲ್ಲೇಖಿಸದೆ ತಮ್ಮ ತಂಟೆಗೆ ಬಂದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

.

Published on: Jun 26, 2023 04:43 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.