ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ ಜೈಲಲ್ಲಿ ಎದೆನೋವು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು

ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ ಜೈಲಲ್ಲಿ ಎದೆನೋವು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 02, 2022 | 11:13 AM

ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಮೂವರು ವೈದ್ಯರ ತಂಡವೊಂದು ಸ್ವಾಮೀಜಿಯವರ ಆರೋಗ್ಯ ತಪಾಸಣೆ ನಡೆಸುತ್ತಿದೆ. ಅವರನ್ನು ಆಸ್ಪತೆಗೆ ಕರೆತಂದಾಗ ಹಲವಾರು ಭಕ್ತರು ಅಲ್ಲಿ ಜಮಾಯಿಸಿದ್ದರು.

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳಿಗೆ (Shivamurthy Swamiji) ಜಿಲ್ಲಾ ಕಾರಾಗೃಹದಲ್ಲಿ ಎದೆನೋವು ಕಾಣಿಸಿಕೊಂಡಿದ್ದರಿಂದ ವೈದ್ಯಕೀಯ ತಪಾಸಣೆಗಾಗಿ ಅವರನ್ನು ಶುಕ್ರವಾರ ಬೆಳಗ್ಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ (district hospital) ದಾಖಲಿಸಲಾಗಿದೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಮೂವರು ವೈದ್ಯರ ತಂಡವೊಂದು ಸ್ವಾಮೀಜಿಯವರ ಆರೋಗ್ಯ ತಪಾಸಣೆ ನಡೆಸುತ್ತಿದೆ. ಅವರನ್ನು ಆಸ್ಪತೆಗೆ ಕರೆತಂದಾಗ ಹಲವಾರು ಭಕ್ತರು ಅಲ್ಲಿ ಜಮಾಯಿಸಿದ್ದರು.