AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ; ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ: ಗುರು ಕಿರಣ್

ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ; ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ: ಗುರು ಕಿರಣ್

ಅಶೋಕ್​ ಪೂಜಾರಿ
| Edited By: |

Updated on:Sep 20, 2024 | 6:45 PM

Share

ನಟ ದರ್ಶನ್​ ಕೇಸ್​ ಬಗ್ಗೆ ಈಗಾಗಲೇ ಚಿತ್ರರಂಗದ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಈಗ ಸಂಗೀತ ನಿರ್ದೇಶಕ ಗುರು ಕಿರಣ್​ ಕೂಡ ಮಾತನಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು. ‘ದರ್ಶನ್​ ಪ್ರಕರಣ ವೈಯಕ್ತಿಕ. ಅದಕ್ಕೂ ಸಿನಿಮಾ ರಂಗಕ್ಕೂ ಸಂಬಂಧ ಇಲ್ಲ’ ಎಂದು ಗುರು ಕಿರಣ್​ ಹೇಳಿದ್ದಾರೆ.

ಚಿತ್ರರಂಗದಲ್ಲಿ ದರ್ಶನ್​ ಮತ್ತು ಗುರು ಕಿರಣ್​ ಜೊತೆಯಾಗಿ ಕೆಲಸ ಮಾಡಿದವರು. ಆ ಹಿನ್ನೆಲೆಯಲ್ಲಿ ಗುರು ಕಿರಣ್​ ಅವರು ದರ್ಶನ್​ ಕುರಿತು ಪ್ರತಿಕ್ರಿಯಿಸಿದ್ದಾರೆ. ‘ಸ್ನೇಹಿತನಾಗಿ ದರ್ಶನ್​ ಹೊರಗೆ ಬರಬೇಕು ಅಂತ ನಾವು ಹೇಳುತ್ತೇವೆ. ಆದರೆ ಕಾನೂನಿಗೆ ಅದರದ್ದೇ ಆದ ಪ್ರಕ್ರಿಯೆ ಇದೆ. ಪೊಲೀಸ್​ನವರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ. ದರ್ಶನ್ ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ’ ಎಂದಿದ್ದಾರೆ ಗುರು ಕಿರಣ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 20, 2024 06:44 PM

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More