ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರ; ಬಸವನಗುಡಿ ಠಾಣೆಗೆ ಇಂದು ಹಂಸಲೇಖ ಹಾಜರು ಸಾಧ್ಯತೆ

Hamsalekha: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗುವ ಸಾಧ್ಯತೆ ಇದೆ.

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹಾಜರಾಗುವ ಸಾಧ್ಯತೆ ಇದೆ. ಅವಹೇಳನಕಾರಿ ಹೇಳಿಕೆ ಸಂಬಂಧ ಹಂಸಲೇಖ ವಿರುದ್ಧ ದೂರು ದಾಖಲಾಗಿತ್ತು. ಅದರ ಆಧಾರದಲ್ಲಿ ವಿಚಾರಣೆಗೆ ಹಾಜರಾಗಲು ಪೊಲೀಸರು ಹಂಸಲೇಖಗೆ ನೋಟಿಸ್ ಜಾರಿ ಮಾಡಿದ್ದರು. ಆದರೆ ಅನಾರೋಗ್ಯದ ಕಾರಣ ನೀಡಿ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹಂಸಲೇಖ ಪರ ವಕೀಲರು 25ನೇ ತಾರೀಖು ವಿಚಾರಣೆಗೆ ಹಾಜರಾಗುವುದಾಗಿ ಈ ಹಿಂದೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಹಂಸಲೇಖ ಬಸವನಗುಡಿ‌ ಠಾಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಹೇಳಿಕೆ ನೀಡಿದ್ದರು. ಮೇಲುಜಾತಿ ಹಾಗೂ ಕೀಳುಜಾತಿ, ಜಾತಿ ತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ಅವರು ಪ್ರಯೋಗಿಸಿದ್ದ ಪದಗಳು ವಿವಾದಕ್ಕೆ ಕಾರಣವಾಗಿತ್ತು. ನಂತರ ತಮ್ಮ ಮಾತುಗಳಿಗೆ ಹಂಸಲೇಖ ಕ್ಷಮೆ ಕೋರಿದ್ದರು. ರಾಜ್ಯದ ಹಲವು ಪ್ರಗತಿಪರ ಸಂಘಟನೆಗಳು ಹಂಸಲೇಖ ಹೇಳಿಕೆಗೆ ಬೆಂಬಲ ಸೂಚಿಸಿವೆ.

ಇದನ್ನೂ ಓದಿ:

‘ನಾನು ಆರೋಗ್ಯವಾಗಿದ್ದೀನಿ, ಅಭಿಮಾನ ಆವೇಶವಾಗಬಾರದು; ಆವೇಶ ಅವಘಡಗಳಿಗೆ ಕಾರಣವಾಗಬಾರದು’: ಹಂಸಲೇಖ

ಹಂಸಲೇಖ ಹೇಳಿಕೆ ಬೆಂಬಲಿಸಿದ ಪ್ರಗತಿಪರ ಸಂಘಟನೆಗಳು; ಅವರಿಗೆ ಭದ್ರತೆ ನೀಡುವಂತೆ ಮನವಿ

Click on your DTH Provider to Add TV9 Kannada