ರಂಗೇರಿದ ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಯಾವ ಕಡೆ?
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ರಂಗೇರಿದೆ. ಆದ್ರೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಸ್ಲಿಂ ಸಮುದಾಯ ಕಂಟಕವಾಗಿ ಪರಿಣಮಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬಾಗಲಕೋಟೆ ಮುಸ್ಲಿಮರಿಗೂ ಕಾಂಗ್ರೆಸ್ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲೂ ದಾಣವಗೆರೆ ಮುಸ್ಲಿಂ ಸಮುದಾಯದ ಬಂಡಾಯದ ಬಿಸಿ ತಟ್ಟುತ್ತಾ ಎನ್ನುವ ಆತಂಕ ಇತ್ತು. ಆದ್ರೆ, ಬಾಗಲಕೋಟೆ ಮುಸ್ಲಿಮರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಾಗಲಕೋಟೆಯಲ್ಲಿ ನಮ್ಮ ಸಮುದಾಯದಿಂದ ಯಾವುದೇ ಬಂಡಾಯ ಇಲ್ಲ. ನಾವೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆ, (ಮಾರ್ಚ್ 26): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ರಂಗೇರಿದೆ. ಆದ್ರೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಸ್ಲಿಂ ಸಮುದಾಯ ಕಂಟಕವಾಗಿ ಪರಿಣಮಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬಾಗಲಕೋಟೆ ಮುಸ್ಲಿಮರಿಗೂ ಕಾಂಗ್ರೆಸ್ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲೂ ದಾಣವಗೆರೆ ಮುಸ್ಲಿಂ ಸಮುದಾಯದ ಬಂಡಾಯದ ಬಿಸಿ ತಟ್ಟುತ್ತಾ ಎನ್ನುವ ಆತಂಕ ಇತ್ತು. ಆದ್ರೆ, ಬಾಗಲಕೋಟೆ ಮುಸ್ಲಿಮರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಾಗಲಕೋಟೆಯಲ್ಲಿ ನಮ್ಮ ಸಮುದಾಯದಿಂದ ಯಾವುದೇ ಬಂಡಾಯ ಇಲ್ಲ. ನಾವೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ ನಮ್ಮ ಸಮುದಾಯಕ್ಕೆ ಆದ ಅನ್ಯಾಯ ಹೈಕಮಾಂಡ್ ನಾಯಕರು ಸರಿ ಮಾಡ್ತೇವೆ ಎಂದು ಹೇಳಿದ್ದಾರೆ. ದಾವಣೆಗೆರೆ ವಸ್ತು ಸ್ಥಿತಿ ಬೇರೆಯೇ ಇದೆ. ಬಾಗಲಕೋಟೆಯ ವಸ್ತು ಸ್ಥಿತಿ ಬೇರೆ ಇದೆ. ಬಾಗಲಕೋಟೆಯ ಶಾಸಕರಾಗಿದ್ದ ದಿವಂಗತ ಎಚ್.ವೈ ಮೇಟಿ ಅವರು ನಮ್ಮ ಸಮುದಾಯದ ಜನರನ್ನು ಸರಿಯಾಗಿ ನೋಡಿಕೊಂಡಿದ್ದಾರೆ. ನಾವೆಲ್ಲರೂ ಮೇಟಿ ಕುಟುಂಬದ ಪರ ನಿಲ್ಲುತ್ತೇವೆ. ಬಾಗಲಕೋಟೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಜೊತೆಗೆ ನಿಲ್ಲುತ್ತೆ. ಈ ಬಾರಿ ನಾವು ಉಮೇಶ್ ಪರ ಕೆಲಸ ಮಾಡ್ತೇವೆ, ಇಲ್ಲಿ ನಮ್ಮ ಬಂಡಾಯ ಇಲ್ಲ ಎಂದಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ನಿಟ್ಟುಸಿರುಬಿಟ್ಟಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕ್ಯಾನ್ಸರ್, ಅದರ ತಡೆಗಟ್ಟುವಿಕೆ, ಮುಂಚಿತವಾಗಿ ಪತ್ತೆಹಚ್ಚುವಿಕೆ, ಚಿಕಿತ್ಸೆ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ

