ರಂಗೇರಿದ ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಯಾವ ಕಡೆ?

Edited By:

Updated on: Mar 26, 2026 | 7:13 PM

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ರಂಗೇರಿದೆ. ಆದ್ರೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಮುಸ್ಲಿಂ ಸಮುದಾಯ ಕಂಟಕವಾಗಿ ಪರಿಣಮಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬಾಗಲಕೋಟೆ ಮುಸ್ಲಿಮರಿಗೂ ಕಾಂಗ್ರೆಸ್​​ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲೂ ದಾಣವಗೆರೆ ಮುಸ್ಲಿಂ ಸಮುದಾಯದ ಬಂಡಾಯದ ಬಿಸಿ ತಟ್ಟುತ್ತಾ ಎನ್ನುವ ಆತಂಕ ಇತ್ತು. ಆದ್ರೆ, ಬಾಗಲಕೋಟೆ ಮುಸ್ಲಿಮರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಾಗಲಕೋಟೆಯಲ್ಲಿ ನಮ್ಮ ಸಮುದಾಯದಿಂದ ಯಾವುದೇ ಬಂಡಾಯ ಇಲ್ಲ. ನಾವೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಗಲಕೋಟೆ, (ಮಾರ್ಚ್ 26): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ರಂಗೇರಿದೆ. ಆದ್ರೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಮುಸ್ಲಿಂ ಸಮುದಾಯ ಕಂಟಕವಾಗಿ ಪರಿಣಮಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬಾಗಲಕೋಟೆ ಮುಸ್ಲಿಮರಿಗೂ ಕಾಂಗ್ರೆಸ್​​ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲೂ ದಾಣವಗೆರೆ ಮುಸ್ಲಿಂ ಸಮುದಾಯದ ಬಂಡಾಯದ ಬಿಸಿ ತಟ್ಟುತ್ತಾ ಎನ್ನುವ ಆತಂಕ ಇತ್ತು. ಆದ್ರೆ, ಬಾಗಲಕೋಟೆ ಮುಸ್ಲಿಮರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಾಗಲಕೋಟೆಯಲ್ಲಿ ನಮ್ಮ ಸಮುದಾಯದಿಂದ ಯಾವುದೇ ಬಂಡಾಯ ಇಲ್ಲ. ನಾವೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿ ನಮ್ಮ ಸಮುದಾಯಕ್ಕೆ ಆದ ಅನ್ಯಾಯ ಹೈಕಮಾಂಡ್ ನಾಯಕರು ಸರಿ ಮಾಡ್ತೇವೆ ಎಂದು ಹೇಳಿದ್ದಾರೆ. ದಾವಣೆಗೆರೆ ವಸ್ತು ಸ್ಥಿತಿ ಬೇರೆಯೇ ಇದೆ. ಬಾಗಲಕೋಟೆಯ ವಸ್ತು ಸ್ಥಿತಿ ಬೇರೆ ಇದೆ. ಬಾಗಲಕೋಟೆಯ ಶಾಸಕರಾಗಿದ್ದ ದಿವಂಗತ ಎಚ್.ವೈ ಮೇಟಿ ಅವರು ನಮ್ಮ ಸಮುದಾಯದ ಜನರನ್ನು ಸರಿಯಾಗಿ ನೋಡಿಕೊಂಡಿದ್ದಾರೆ. ನಾವೆಲ್ಲರೂ ಮೇಟಿ ಕುಟುಂಬದ ಪರ ನಿಲ್ಲುತ್ತೇವೆ. ಬಾಗಲಕೋಟೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಜೊತೆಗೆ ನಿಲ್ಲುತ್ತೆ. ಈ ಬಾರಿ ನಾವು ಉಮೇಶ್ ಪರ ಕೆಲಸ ಮಾಡ್ತೇವೆ, ಇಲ್ಲಿ ನಮ್ಮ ಬಂಡಾಯ ಇಲ್ಲ ಎಂದಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ನಿಟ್ಟುಸಿರುಬಿಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More