ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಕರೀಂ ಸಾಬ್ ಕುಟುಂಬ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಈ ಮುಸ್ಲಿಂ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡುತ್ತಿದ್ದು, ಮಾಲಾಧಾರಿಗಳ ವಿಧಿವಿಧಾನ ಮತ್ತು ಸಂಪ್ರದಾಯದಂತೆ ಭೋಜನವನ್ನು ಸಿದ್ಧಪಡಿಸಲಾಗುತ್ತಿದೆ. ಕರೀಂ ಸಾಬ್ ಕುಟುಂಬವು ಯಾವುದೇ ಧರ್ಮದ ಕಾರ್ಯಕ್ರಮವಿರಲಿ, ಅದರಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವುದಾಗಿ ತಿಳಿಸಿದೆ. ಸುಮಾರು 35ಕ್ಕೂ ಹೆಚ್ಚು ಮಾಲಾಧಾರಿಗಳು ಈ ಭೋಜನ ವ್ಯವಸ್ಥೆಯಲ್ಲಿ ಭಾಗಿಯಾಗಿದ್ದು, ಇವರ ಸೇವೆಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
ರಾಯಚೂರು, ಡಿಸೆಂಬರ್ 28: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಕರೀಂ ಸಾಬ್ ಕುಟುಂಬ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಈ ಮುಸ್ಲಿಂ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡುತ್ತಿದ್ದು, ಮಾಲಾಧಾರಿಗಳ ವಿಧಿವಿಧಾನ ಮತ್ತು ಸಂಪ್ರದಾಯದಂತೆ ಭೋಜನವನ್ನು ಸಿದ್ಧಪಡಿಸಲಾಗುತ್ತಿದೆ. ಕರೀಂ ಸಾಬ್ ಕುಟುಂಬವು ಯಾವುದೇ ಧರ್ಮದ ಕಾರ್ಯಕ್ರಮವಿರಲಿ, ಅದರಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವುದಾಗಿ ತಿಳಿಸಿದೆ. ಸುಮಾರು 35ಕ್ಕೂ ಹೆಚ್ಚು ಮಾಲಾಧಾರಿಗಳು ಈ ಭೋಜನ ವ್ಯವಸ್ಥೆಯಲ್ಲಿ ಭಾಗಿಯಾಗಿದ್ದು, ಇವರ ಸೇವೆಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

