ತೀವ್ರ ಸ್ವರೂಪ ಪಡೆದ ದಾವಣಗೆರೆ ದಂಗಲ್: ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ

Updated on: Apr 20, 2026 | 8:00 PM

ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಜೊತೆಯಾಗಿ ಅಬ್ದುಲ್ ಜಬ್ಬಾರ್ ಹಾಗೂ ಸಚಿವ ಜಮೀರ ಅಹ್ಮದ್ ಖಾನ್ ವಿರುದ್ಧ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಸಹ ಸುದ್ದಿಗೋಷ್ಠಿ ನಡೆಸಿ ಅಬ್ದುಲ್ ಜಬ್ಬರ್ ಹಾಗೂ ಜಮೀರ್ ವಿರುದ್ಧ ಕಿಡಿಕಾರಿದ್ದು, ಕಲೆವೊಂದಿಷ್ಟು ಆರೋಪಗಳನ್ನು ಮಾಡಿದ್ದಾರೆ.

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ದಕ್ಷಿಣ ಉಪಚುನಾವಣೆಯ (Davanagere South By Poll) ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಜೊತೆಯಾಗಿ ಅಬ್ದುಲ್ ಜಬ್ಬಾರ್ ಹಾಗೂ ಸಚಿವ ಜಮೀರ ಅಹ್ಮದ್ ಖಾನ್ ವಿರುದ್ಧ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಸಹ ಸುದ್ದಿಗೋಷ್ಠಿ ನಡೆಸಿ ಅಬ್ದುಲ್ ಜಬ್ಬರ್ ಹಾಗೂ ಜಮೀರ್ ವಿರುದ್ಧ ಕಿಡಿಕಾರಿದ್ದು, ಕಲೆವೊಂದಿಷ್ಟು ಆರೋಪಗಳನ್ನು ಮಾಡಿದ್ದಾರೆ.

ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಮನೆಯಲ್ಲಿ ಕುಳಿತುಕೊಂಡು ಬಿಜೆಪಿ ಹಾಗೂ ಎಸ್​​​ಡಿಪಿಐಗೆ ಸಹಾಯ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋಗಳಿವೆ. ಅಧ್ಯಕ್ಷರಿಗೆ ಅವುಗಳನ್ನು ನೀಡುತ್ತೇನೆ ಎಂದು ಅಮಾನತುಗೊಂಡ ಅಬ್ದುಲ್ ಜಬ್ಬಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೇಷರತ್ ಬೆಂಬಲ ನೀಡಿದ್ದೇ ಅಪರಾಧವೇ? ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘ- ಸಂಸ್ಥೆಗಳು

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More