ಕೊಪ್ಪಳ: ಗಣವೇಷ ಧರಿಸಿ RSS ಪಥಸಂಚಲನದಲ್ಲಿ ಭಾಗಿಯಾದ ಮುಸ್ಲಿಂ ಮುಖಂಡ

Edited By:

Updated on: Nov 03, 2026 | 12:49 PM

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಮುಸ್ಲಿಂ ಮುಖಂಡ ಲಾಡ್ ಸಾಬ್ ಕೊಳ್ಳಿ ಗಣವೇಷ ಧರಿಸಿ ಹೆಜ್ಜೆ ಹಾಕಿದ್ದು ಗಮನ ಸೆಳೆದಿದೆ. ತಾನು ಬಿಜೆಪಿಯಲ್ಲಿ ಇದ್ದು ಗಣವೇಷ ಹಾಕಲು ತನಗೆ ಯಾವುದೇ ಹಿಂಜರಿಕೆ ಇಲ್ಲ ಎಂದವರು ತಿಳಿಸಿದ್ದಾರೆ. ಆದರೆ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಗೆ ಅವರು ಪ್ರಬಲ ಆಕಾಂಕ್ಷಿಯಾಗಿರುವುದರಿಂದ ಹೀಗೆ ನಡೆದುಕೊಂಡಿರುವುದಾಗಿ ಕೆಲವರು ಆರೋಪಿಸಿದ್ದಾರೆ.

ಕೊಪ್ಪಳ, ನವೆಂಬರ್​​ 03: ಜಿಲ್ಲೆಯ ಕುಷ್ಟಗಿಯಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾಗಿರುವ ಲಾಡ್ ಸಾಬ್ ಕೊಳ್ಳಿ ಅವರು ಗಣವೇಷವನ್ನು ಧರಿಸಿ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಕುಷ್ಟಗಿಯ ಪ್ರಮುಖ ವೃತ್ತದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಅವರ ಭಾಗವಹಿಸುವಿಕೆ ವಿಶೇಷವಾಗಿತ್ತು. ಲಾಡ್ ಸಾಬ್ ಕೊಳ್ಳಿ ಅವರ ಈ ನಡೆಯನ್ನು ರಾಜಕೀಯ ವಿರೋಧಿಗಳು ಟೀಕಿಸಿದ್ದು, ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಗೆ ಅವರು ಪ್ರಬಲ ಆಕಾಂಕ್ಷಿಯಾಗಿರುವುದರಿಂದ ಹೀಗೆ ನಡೆದುಕೊಂಡಿರುವುದಾಗಿ ಆರೋಪಿಸಿದ್ದಾರೆ. ಆದರೆ ಇದಕ್ಕೆ ಉತ್ತರಿಸಿರುವ ಲಾಡ್ ಸಾಬ್ ಕೊಳ್ಳಿ, ತಾನು ಬಿಜೆಪಿಯಲ್ಲಿಯೇ ಇರುವ ಕಾರಣ ಗಣವೇಷ ಹಾಕಲು ತನಗೆ ಯಾವುದೇ ಹಿಂಜರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 03, 2026 12:47 PM
Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More