ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

Edited By:

Updated on: Apr 15, 2026 | 9:46 PM

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್​​ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರಿಂದ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರು ಆಕ್ರೋಶಗೊಂಡಿದ್ದು, ದಾವಣಗೆರೆಯಲ್ಲಿ ಜಸ್ಟೀಸ್ ಫಾರ್ ಅಬ್ದುಲ್ ಜಬ್ಬಾರ್ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಅಬ್ದುಲ್ ಜಬ್ಬಾರ್ ಅಭಿಮಾನಿಯೋರ್ವ ಮಾತನಾಡಿ, ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್​​ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರಿಂದ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರು ಆಕ್ರೋಶಗೊಂಡಿದ್ದು, ದಾವಣಗೆರೆಯಲ್ಲಿ ಜಸ್ಟೀಸ್ ಫಾರ್ ಅಬ್ದುಲ್ ಜಬ್ಬಾರ್ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಅಬ್ದುಲ್ ಜಬ್ಬಾರ್ ಅಭಿಮಾನಿಯೋರ್ವ ಮಾತನಾಡಿ, ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More