AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಸಲೀಂ ಅಹ್ಮದ್​​ ಸೇರಿ ಮೂವರಿಗೆ ಸಚಿವ ಸ್ಥಾನಕ್ಕೆ ಮನವಿ

ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಸಲೀಂ ಅಹ್ಮದ್​​ ಸೇರಿ ಮೂವರಿಗೆ ಸಚಿವ ಸ್ಥಾನಕ್ಕೆ ಮನವಿ

ಪ್ರಸನ್ನ ಗಾಂವ್ಕರ್​
| Edited By: |

Updated on:Jun 22, 2026 | 3:22 PM

Share

ಮುಸ್ಲಿಂ ಧರ್ಮಗುರುಗಳು ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಸಮುದಾಯಕ್ಕೆ ಮೂರು ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಿಂದ ಸಲೀಂ ಅಹ್ಮದ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲಾಗಿದ್ದು, ಉತ್ತರ ಕರ್ನಾಟಕದಲ್ಲಿ ಸಮುದಾಯದ ಕೆಲಸಗಳಲ್ಲಿ ಸಲೀಂ ಪಾತ್ರದ ಬಗ್ಗೆ ವಿವರಿಸಿದ್ದಾರೆ.

ಬೆಂಗಳೂರು, ಜೂನ್​​ 22: ಮುಸ್ಲಿಂ ಧರ್ಮಗುರುಗಳು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮುದಾಯಕ್ಕೆ ಮಂತ್ರಿ ಸ್ಥಾನದ ಬೇಡಿಕೆ ಇಟ್ಟಿದ್ದಾರೆ. 14 ಜಿಲ್ಲೆಗಳಿಂದ ಆಗಮಿಸಿರುವ ಉಲೇಮಾಗಳು ಸಂಪುಟ ವಿಸ್ತರಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದು, ಮೂರು ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಪ್ರಮುಖವಾಗಿ ಸಲೀಂ ಅಹ್ಮದ್​​ಗೆ ಸಚಿವ ಸ್ಥಾನಕ್ಕೆ ಬೇಡಿಕೆ ಇಡಲಾಗಿದ್ದು, ಕಳೆದ ೪೦ ವರ್ಷಗಳಿಂದ ಪಕ್ಷದಲ್ಲಿರುವ ಅವರು ಜನಾನುರಾಗಿಯಾದವರು. ಹೀಗಾಗಿ ಅವರಿಗೆ ಒಂದು ಅವಕಾಶ ನೀಡಿ ಎಂದು ಕಾಂಗ್ರೆಸ್​​ ನಾಯಕರನ್ನು ವಿನಂತಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 22, 2026 03:20 PM

Follow Us