AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಕೊನೆ ದಿನದಂದು ಕೇಸರಿ ವಸ್ತ್ರ ಹಿಡಿದು ರಾಜಕೀಯ ಭವಿಷ್ಯ ನುಡಿದ ಲಾಲಸಾಬ್, ವಿಡಿಯೋ ವೈರಲ್

ಮೊಹರಂ ಕೊನೆ ದಿನದಂದು ಕೇಸರಿ ವಸ್ತ್ರ ಹಿಡಿದು ರಾಜಕೀಯ ಭವಿಷ್ಯ ನುಡಿದ ಲಾಲಸಾಬ್, ವಿಡಿಯೋ ವೈರಲ್

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jul 30, 2023 | 10:40 AM

Share

ಹೆಬ್ಬಳ್ಳಿ ಗ್ರಾಮದ ಪ್ರಸಿದ್ದ ಲಾಲಸಾಬವಲಿ ಎನ್ನುವರು ದರ್ಗಾದಲ್ಲಿ ನಿಂತು ಕೇಸರಿ ವಸ್ತ್ರ ಹಿಡಿದು ರಾಜಕೀಯ ಭವಿಷ್ಯ ನುಡಿದಿದ್ದು, ಇದೀಗ ಲಾಲಸಾಬ್ ಅಜ್ಜನ‌ ಭವಿಷ್ಯವಾಣಿ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬಾಗಲಕೋಟೆ, (ಜುಲೈ 30): ನಿನ್ನೆ(ಜುಲೈ 39) ಮೊಹರಂ ಕೊನೆ ದಿನ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಇದರ ಮಧ್ಯೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕೇಸರಿ ವಸ್ತ್ರ ಹಿಡಿದು ಅಜ್ಜಲಾಲಸಾಬ್ ಎನ್ನುವರು ರಾಜಕೀಯ ಭವಿಷ್ಯ ನುಡಿದಿದ್ದಾರೆ. ಕೇಸರಿ‌ವಸ್ತ್ರ ಹಿಡಿದು ಇದರ ಸಲುವಾಗಿ ಬಹಳ ಬಡಿದಾಡುತ್ತಾರೆ. ಇದರ‌ ಸಲುವಾಗಿ ಹೆಣಗಳು ಬೀಳುತ್ತಿವೆ. ಆದರೆ ಬರೆದು ಇಟ್ಟುಕೊಳ್ಳಿ, ಖುರ್ಚಿ ‌ಮಾತ್ರ ಅದ ಗಟ್ಟಿ ಪಾ ಎಂದು ಕೇಸರಿ ವಸ್ತ್ರ ತೂರಿದ್ದಾರೆ. ಇದರೊಂದಿಗೆ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯುವುದು ಫಿಕ್ಸ್​ ಎಂದು ಜನರು ವಿಶ್ಲೇಷಣೆ ಮಾಡಿದ್ದಾರೆ. ಇದೀಗ ಕೇಸರಿ ವಸ್ತ್ರ ಹಿಡಿದು ಹೆಬ್ಬಳ್ಳಿ ಗ್ರಾಮದ ಪ್ರಸಿದ್ದ ಲಾಲಸಾಬವಲಿ ದರ್ಗಾದಲ್ಲಿ ಭವಿಷ್ಯ ನುಡಿದಿರುವ ಲಾಲಸಾಬ್ ಅಜ್ಜನ‌ ಭವಿಷ್ಯವಾಣಿ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More