Loading video

ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!

|

Updated on: Mar 21, 2025 | 11:47 AM

‘‘ಹನಿಟ್ರ್ಯಾಪ್ ಸರ್ಕಾರ, ಹನಿಟ್ರ್ಯಾಪ್ ಸರ್ಕಾರ’’ ಎಂದು ಘೋಷಣೆಗಳನ್ನು ಕೂಗುತ್ತಾ ಪ್ರತಿಪಕ್ಷ ನಾಯಕರು ಮುಸ್ಲಿಂ ಮೀಸಲಾತಿ ವಿಧೇಯಕದ ಪ್ರತಿಗಳನ್ನು ಹರಿದು ಕಾಗದ ಚೂರುಗಳನ್ನು ಸ್ಪೀಕರ್ ಮೇಲೆ ಎಸೆದ ಕರಾಳ ಇತಿಹಾಸಕ್ಕೆ ಕರ್ನಾಟಕ ವಿಧಾನಸಭೆ ಶುಕ್ರವಾರ ಸಾಕ್ಷಿಯಾಯಿತು. ವಿಧಾನಸಭೆ ಹೈಡ್ರಾಮಾದ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಮಾರ್ಚ್ 21: ಕರ್ನಾಟಕ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾದವು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, ‘‘ಹನಿಟ್ರ್ಯಾಪ್ ಸರ್ಕಾರ’’ ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ, ಪ್ರತಿಪಕ್ಷದ ಶಾಸಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಟ್ಟಾದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 21, 2025 11:44 AM