ಹುಬ್ಬಳ್ಳಿ: ನೇಹಾ ಹಿರೇಮಠ ಸಾವಿಗೆ ನ್ಯಾಯ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಸಮುದಾಯದವರಿಂದ ಪ್ರತಿಭಟನಾ ರ‍್ಯಾಲಿ

|

Updated on: Apr 22, 2024 | 5:44 PM

ಫಯಾಜ್ ಹೆಸರಿನ ನರರಾಕ್ಷಸನ ಹೇಯಕೃತ್ಯಕ್ಕೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಅವನನ್ನು ಗಲ್ಲಿಗೇರಿಸಿ ಎಂಬ ಕೂಗೂ ಎಲ್ಲ ಕಡೆ ಕೇಳಿಬರುತ್ತಿದೆ. ವಿರೋಧ ಪಕ್ಷಗಳ ನಾಯಕರು ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ (Neha Hiremath murder) ಖಂಡಿಸಿ ನಗರದ ಮುಸ್ಲಿಂ ಸಂಘಟನೆಗಳು ಇಂದು ಅರ್ಧ ದಿನ ಹುಬ್ಬಳ್ಳಿ ಬಂದ್ ಹೆ ಕರೆ ನೀಡಿದ್ದನ್ನು ನಾವು ಬೆಳಗ್ಗೆ ವರದಿ ಮಾಡಿದ್ದೆವು. ಬಂದ್ ಗೆ ಪೂರಕವಾಗಿ ನಗರದ ಅಂಜುಮನ್ ಮತ್ತು ಇತರ ಮುಸ್ಲಿಂ ಶಿಕ್ಷಣ ಸಂಸ್ಥೆಯ (Muslim educational institutions) ವಿದ್ಯಾರ್ಥಿ ವಿದ್ಯಾರ್ಥಿನಿಯರು, ಅಲ್ಲಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಧಾರ್ಮಿಕ ಮುಖಂಡರು, ಮೌಲ್ವಿಗಳು ಹಾಗೂ ಮುಸ್ಲಿಂ ಸಮುದಾಯದ ಜನ ಪ್ರತಿಭಟನಾ ಱಲಿ (protest rally) ನಡೆಸಿದರು. ಸಾವಿರಾರು ವಿದ್ಯಾರ್ಥಿನಿಯರು ಱಲಿಯಲ್ಲಿ ಪಾಲ್ಗೊಂಡಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅವರೆಲ್ಲ ನೇಹಾ ಹಿರೇಮಠ ಸಾವಿಗೆ ನ್ಯಾಯ ಸಿಗಲೇಬೇಕೆಂದು ಘೋಷಣೆ ಕೂಗಿದರು. ಫಯಾಜ್ ಹೆಸರಿನ ನರರಾಕ್ಷಸನ ಹೇಯಕೃತ್ಯಕ್ಕೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಅವನನ್ನು ಗಲ್ಲಿಗೇರಿಸಿ ಎಂಬ ಕೂಗೂ ಎಲ್ಲ ಕಡೆ ಕೇಳಿಬರುತ್ತಿದೆ. ವಿರೋಧ ಪಕ್ಷಗಳ ನಾಯಕರು ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದ್ದನ್ನು ಸ್ವಾಗತಿಸಿದ ನಿರಂಜನ ಹಿರೇಮಠ

Follow us on