AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಕೆ.ಹೆಚ್. ಮುನಿಯಪ್ಪ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆ ರೋಷಾವೇಶ: ಕಾರಣ ಇಲ್ಲಿದೆ

ಸಚಿವ ಕೆ.ಹೆಚ್. ಮುನಿಯಪ್ಪ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆ ರೋಷಾವೇಶ: ಕಾರಣ ಇಲ್ಲಿದೆ

ನವೀನ್ ಕುಮಾರ್ ಟಿ.
| Edited By: |

Updated on: Sep 06, 2026 | 11:13 AM

Share

ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರ್ಯಕ್ರಮದಲ್ಲಿ ತಸ್ಲೀಮ್ ಎಂಬ ಮುಸ್ಲಿಂ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಸೇರಿದಂತೆ ಮೂಲಭೂತ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿರುವುದನ್ನು ಖಂಡಿಸಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಜನರ ಸಮಸ್ಯೆಗಳನ್ನು ಆಲಿಸದ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದಿದ್ದಾರೆ. ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 06: ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದ ಪ್ರಜಾಸೇವಾ ಇಲಾಖೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ, ಸಚಿವ ಕೆ.ಹೆಚ್. ಮುನಿಯಪ್ಪ ಅವರ ಸಮ್ಮುಖದಲ್ಲಿ ತಸ್ಲೀಮ್ ಎಂಬ ಮುಸ್ಲಿಂ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರಸಂಗ ನಡೆದಿದೆ. ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಸೇರಿದಂತೆ ಮೂಲಭೂತ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿರುವ ಬಗ್ಗೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸಲು ನಿರ್ಲಕ್ಷ್ಯ ತೋರುತ್ತಿದ್ದು, ಕೌಂಟರ್‌ಗಳಿಗೆ ಅಲೆದಾಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ತಮ್ಮ ತಾಯಿಯ ಪಿಂಚಣಿ ಸಮಸ್ಯೆಯನ್ನು ಕೂಡ ಪ್ರಸ್ತಾಪಿಸಿದ ಅವರು, ಸಚಿವರು ಸಭೆಗಳನ್ನು ನಡೆಸಿ ತೆರಳಿದರೆ ಜನಸಾಮಾನ್ಯರ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us