ರಾಯಚೂರು: ಹತ್ತು ವರ್ಷಗಳಿಂದ ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆಗೆ ತೆರಳುತ್ತಿದ್ದಾರೆ ಈ ಮುಸ್ಲಿಂ ವ್ಯಕ್ತಿ
ರಾಯಚೂರು ಜಿಲ್ಲೆಯ ಸಿರವಾರದ ಪಟ್ಟಣ ಒಂದರಲ್ಲಿ ಮುಸ್ಲಿಂ ಕುಟುಂಬವೊಂದು ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ವಿತರಿಸಿದ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿದ್ದು, ವಿಡಿಯೋ ಸಹ ವೈರಲ್ ಆಗಿತ್ತು. ಇದೀಗ, ಮುಸ್ಲಿಂ ಯುವಕನ್ನೊಬ್ಬ ಹತ್ತು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವುದು ತಿಳಿದು ಬಂದಿದೆ. ವಿಡಿಯೋ ಇಲ್ಲಿದೆ.
ರಾಯಚೂರು, ಜನವರಿ 3: ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಮುಸ್ಲಿಂ ಯುವಕ ಬಾಬು ಗೌರಂಪೇಟ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಭಾವೈಕ್ಯತೆ ಮೆರೆದಿದ್ದಾರೆ. ಇವರು ಕಳೆದ ಹತ್ತು ವರ್ಷಗಳಿಂದ ಮಾಲೆ ಧರಿಸಿ ಶಬರಿಮಲೆಗೆ ತೆರಳುತ್ತಿದ್ದಾರೆ. ಅದರಂತೆ ಈ ವರ್ಷ ಕೂಡ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ತೆರಳಿ ಸರದಿ ಸಾಲಿನಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಬಾಬು ಗೌರಂಪೇಟ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರು ಅಯ್ಯಪ್ಪ ಮಾಲೆ ಧರಿಸಿರುವ ವಿಡಿಯೋ ಇಲ್ಲಿದೆ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ