ಬಸನಗೌಡ ಪಾಟೀಲ್​ ಯತ್ನಾಳ್​ ಕಾರಿಗೆ ಮುಸ್ಲಿಂ ಯುವಕರಿಂದ ಮುತ್ತಿಗೆ, ಕಪ್ಪು ಬಟ್ಟೆ ಪ್ರದರ್ಶನ

Edited By:

Updated on: Aug 17, 2025 | 5:42 PM

ವಿಜಯಪುರದಲ್ಲಿ ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂಪಾಯಿ ನೀಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಮುಸ್ಲಿಂ ಯುವಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದ ಆಲಮೇಲ ಪಟ್ಟಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಪೊಲೀಸರು ಪ್ರತಿಭಟನಾಕಾರರ ಮೇಲೆ ಕ್ರಮ ಕೈಗೊಂಡಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ವಿಜಯಪುರ, ಆಗಸ್ಟ್​ 17: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೇ ಅವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಘೋಷಿಸಿದ್ದರು. ಈ ಹೇಳಿಕೆಯನ್ನು ಖಂಡಿಸಿ ವಿಜಯಪುರದಲ್ಲಿ ಮುಸ್ಲಿಂ ಯುವಕರು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ಕಾರಿಗೆ ಮುತ್ತಿಗೆ ಹಾಕಿದರು. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ರವಿವಾರ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣಕ್ಕೆ ಸಿದ್ಧಸಿರಿ ಸಹಕಾರಿ ಬ್ಯಾಂಕ್ ಶಾಖೆ ಹಾಗೂ ಎಸ್​​ ಮಾರ್ಟ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಮುಸ್ಲಿಂ ಯುವಕರು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾರನ್ನು ತಡೆದು ಕಪ್ಪುಬಟ್ಟೆ ಪ್ರದರ್ಶಿಸಿದರು.

ಕೂಡಲೇ ಪೊಲೀಸರು ಕಪ್ಪು ಬಟ್ಟೆ ಪ್ರದರ್ಶಿಸಿದ ಕೆಲ ಯುವಕರನ್ನು ತಡೆದು, ವಶಕ್ಕೆ ಪಡೆದರು. ಆಲಮೇಲದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದ ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಬಳಿಕ, ಯುವಕರ ಕುಟುಂಬದ ಮಹಿಳೆಯರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಭೇಟಿಗೆ ಅವಕಾಶ ನೀಡುವಂತೆ ಪೊಲೀಸರ ಎದುರು ಪಟ್ಟು ಹಿಡಿದರು. ಆದರೆ, ಪೊಲೀಸರು ಭೇಟಿ ಅವಕಾಶ ನೀಡಲಿಲ್ಲ. ಬಳಿಕ, ಮುಸ್ಲಿಂ ಸಮುದಾಯದ ಜನರು ಪೊಲೀಸ್​ ಠಾಣೆ ಎದುರು ಜಮಾವಣೆಯಾದರು. ಈ ಸಂದರ್ಭದಲ್ಲಿ ಪೊಲೀಸರು, ದೂರು‌ ಕೊಡಿ ರಜಿಸ್ಟರ್ ಮಾಡಿಕೊಳ್ಳುತ್ತೇವೆ. ಗಲಾಟೆ ಮಾಡಲು ಬಿಡಲ್ಲವೆಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More