ಇಸ್ಲಾಂ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ
ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದವರು ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೋಟೆ ಓಣಿಯಲ್ಲಿ ಈ ಘಟನೆ ನಡೆದಿದೆ. ರಾಜೇಶ್ವರಿ ನಗರದ ನಿವಾಸಿ ಡಾ.ಗುರುಮೂರ್ತಯ್ಯ ರಾಚೋಟಿಮಠ ಮೇಲೆ ಮುಸ್ಲಿಂ ತಂಡ ಮಾರಣಾಂತಿಕ ಹಲ್ಲೆ ಮಾಡಿದೆ.
ಹಾವೇರಿ, (ಸೆಪ್ಟೆಂಬರ್ 21): ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದವರು ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೋಟೆ ಓಣಿಯಲ್ಲಿ ಈ ಘಟನೆ ನಡೆದಿದೆ. ರಾಜೇಶ್ವರಿ ನಗರದ ನಿವಾಸಿ ಡಾ.ಗುರುಮೂರ್ತಯ್ಯ ರಾಚೋಟಿಮಠ ಮೇಲೆ ಮುಸ್ಲಿಂ ತಂಡ ಮಾರಣಾಂತಿಕ ಹಲ್ಲೆ ಮಾಡಿದೆ. ಇನ್ನು ಕ್ಲಿನಿಕ್ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಬಂದು ಪೊಲೀಸರು ದೌಡಾಯಿಸಿ ವೈದ್ಯನನ್ನು ರಕ್ಷಿಸಿದ್ದಾರೆ. ಇನ್ನು ಈ ಸಂಬಂಧ ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

