ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

ಮಂಜುನಾಥ ಸಿ.
|

Updated on: Dec 01, 2023 | 11:08 PM

Muttiah Muralitharan: ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಜೀವನ ಆಧರಿಸಿದ ‘800’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ. ಅದರ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಮುರಳೀಧರನ್ ಅವರು ತಾವು ನೋಡಿದ ಕನ್ನಡ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

ಶ್ರೀಲಂಕಾದ ಜನಪ್ರಿಯ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ (muttiah muralitharan) ಬೆಂಗಳೂರಿಗೆ ಬಂದಿದ್ದಾರೆ. ಅವರ ಜೀವನ ಆಧರಿಸಿದ ‘800’ ಸಿನಿಮಾ ಈಗಾಗಲೇ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದೆ. ಇದೀಗ ಡಿಸೆಂಬರ್ 02 ರಿಂದ ಜಿಯೋ ಸಿನಿಮಾಸ್​ನಲ್ಲಿ ಬಿಡುಗಡೆ ಆಗುತ್ತಿದೆ. ಒಟಿಟಿಯಲ್ಲಿ ಬರುತ್ತಿರುವ ತಮ್ಮ ಜೀವನ ಆಧರಿಸಿದ ಸಿನಿಮಾದ ಪ್ರಚಾರಕ್ಕಾಗಿ ಅವರು ನಗರಕ್ಕೆ ಬಂದಿದ್ದರು. ಈ ಸಮಯದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮುತ್ತಯ್ಯ ಮುರಳೀಧರನ್, ತಾವು ನೋಡಿದ ಕನ್ನಡ ಸಿನಿಮಾಗಳು ಯಾವುವೆಂದು ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ