‘ನಾನು ಪಡೆದ ದೊಡ್ಡ ಪ್ರಶಸ್ತಿ ಕನ್ನಡಿಗರು’; ಅಮೆರಿಕದ ನೆಲದಲ್ಲಿ ನಿಂತು ಹೆಮ್ಮೆಯಿಂದ ಹೇಳಿದ ರಿಷಬ್ ಶೆಟ್ಟಿ

Updated on: Jun 28, 2023 | 7:43 AM

‘ನಾನು ಪಡೆದ ದೊಡ್ಡ ಪ್ರಶಸ್ತಿ ಅಂದರೆ ನೀವು, ಕನ್ನಡಿಗರು’ ಎಂದು ರಿಷಬ್ ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಕನ್ನಡಿಗರು ಭಾಗಿಯಾಗಿದ್ದರು.

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಯಶಸ್ಸಿನ ಬಳಿಕ ಸಾಕಷ್ಟು ಕಡೆಗಳಿಗೆ ಭೇಟಿ ನೀಡಿದ್ದಾರೆ. ಅವರಿಗೆ ಅನೇಕ ಪ್ರಶಸ್ತಿಗಳು ಬಂದಿವೆ. ಪ್ರತಿ ಬಾರಿ ವೇದಿಕೆ ಏರಿದಾಗಲೂ ಅವರು ಕನ್ನಡಿಗರ ಬಗ್ಗೆ ಮಾತನಾಡಿದ್ದಾರೆ. ಕನ್ನಡದ ಕುರಿತು ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈಗ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ದೊರೆತಿದೆ. ಈ ಅವಾರ್ಡ್ ಪಡೆಯಲು ಅವರು ಅಮೆರಿಕದ ವಾಷಿಂಗ್ಟನ್​ನ (Washington) ಸಿಯಾಟಲ್​ಗೆ ಭೇಟಿ ನೀಡಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ್ದಾರೆ. ‘ನಾನು ಪಡೆದ ದೊಡ್ಡ ಪ್ರಶಸ್ತಿ ಅಂದರೆ ನೀವು, ಕನ್ನಡಿಗರು’ ಎಂದು ರಿಷಬ್ ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಕನ್ನಡಿಗರು ಭಾಗಿಯಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More