‘ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ’; ಯುವಿ ಹೇಳಿಕೆಯ ವಿಡಿಯೋ ವೈರಲ್

‘ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ’; ಯುವಿ ಹೇಳಿಕೆಯ ವಿಡಿಯೋ ವೈರಲ್

ಪೃಥ್ವಿಶಂಕರ
|

Updated on: Sep 04, 2024 | 8:14 PM

Yuvraj Singh: ವೈರಲ್ ಆಗಿರುವ ಕ್ಲಿಪ್‌ನಲ್ಲಿ, ಯುವರಾಜ್ ತನ್ನ ತಂದೆಗೆ ಕೆಲವು ಮಾನಸಿಕ ಸಮಸ್ಯೆಗಳಿರಬಹುದು ಎಂದು ಒಪ್ಪಿಕೊಂಡಿದ್ದಾರೆ. ‘ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ, ಆದರೆ ಅವರು ಅದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಯುವರಾಜ್ ಹೇಳಿರುವುದನ್ನು ನಾವು ಗಮನಿಸಬಹುದಾಗಿದೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರು ಇತ್ತೀಚೆಗೆ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ಹರಿಹಾಯ್ದಿದ್ದರು. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಯೋಗರಾಜ್, ‘ಧೋನಿ ಯುವರಾಜ್ ಅವರ ವೃತ್ತಿಜೀವನವನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಿದ್ದರು. ಧೋನಿಯನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ಧೋನಿ ತಮ್ಮ ಮುಖವನ್ನು ಒಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಬೇಕು. ಆತ ಮಹಾನ್ ಕ್ರಿಕೆಟಿಗ, ಆದರೆ ನನ್ನ ಮಗನಿಗೆ ಆತ ಮಾಡಿದ್ದು ಈಗ ಬೆಳಕಿಗೆ ಬರುತ್ತಿದೆ. ಅವನನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದಿದ್ದರು.

ಇದಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಯೋಗರಾಜ್ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು. ಇದೀಗ ಯುವರಾಜ್ ಅವರ ಹಳೆಯ ವೀಡಿಯೊ ವೈರಲ್ ಆಗಿದ್ದು, ಅದರಲ್ಲಿ ಅವರು ತಮ್ಮ ತಂದೆಯ ಮಾನಸಿಕ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ವೈರಲ್ ಆಗಿರುವ ಕ್ಲಿಪ್‌ನಲ್ಲಿ, ಯುವರಾಜ್ ತನ್ನ ತಂದೆಗೆ ಕೆಲವು ಮಾನಸಿಕ ಸಮಸ್ಯೆಗಳಿರಬಹುದು ಎಂದು ಒಪ್ಪಿಕೊಂಡಿದ್ದಾರೆ. ‘ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ, ಆದರೆ ಅವರು ಅದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಯುವರಾಜ್ ಹೇಳಿರುವುದನ್ನು ನಾವು ಗಮನಿಸಬಹುದಾಗಿದೆ.