ನಕಲಿ ವೋಟ್ ನಿಂದಲೇ ನನ್ನ ಮೊದಲು ಸೋಲಾಯ್ತು: ಖರ್ಗೆ ವಾಗ್ದಾಳಿ
ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಇಂದು (ಆಗಸ್ಟ್ 08) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದು, ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇನ್ನು ಇದೇ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, 2019ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸೋತೆ. ಟಾರ್ಗೆಟ್ ಮಾಡಿ ನನ್ನನ್ನು ನಕಲಿ ಮತಗಳಿಂದ 2019ರ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಿಡಿಕಾರಿದರು.
ಬೆಂಗಳೂರು, (ಆಗಸ್ಟ್ 08): ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಅರೋಪ ಮಾಡಿದ್ದು, ಈ ಸಂಬಂಧ ಅಂಕಿ–ಸಂಖ್ಯೆ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನು ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಇಂದು (ಆಗಸ್ಟ್ 08) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದು, ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇನ್ನು ಇದೇ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, 2019ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸೋತೆ. ಟಾರ್ಗೆಟ್ ಮಾಡಿ ನನ್ನನ್ನು ನಕಲಿ ಮತಗಳಿಂದ 2019ರ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಿಡಿಕಾರಿದರು.
