AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haj Pilgrimage; ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಹಿತರಕ್ಷಣೆ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

Haj Pilgrimage; ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಹಿತರಕ್ಷಣೆ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 07, 2023 | 11:14 AM

Share

ಎಲ್ಲ ಸಮುದಾಯಗಳ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಕೇವಲ ಮುಸ್ಲಿಂ ಸಮುದಾಯದವರು (Muslim community) ಮಾತ್ರ ಅಲ್ಲ, ಸಿಖ್, ಕ್ರೈಸ್ತ, ಜೈನ, ಬೌದ್ಧ ಮೊದಲಾದ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ (minority community) ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಹಜ್ ಯಾತ್ರೆಗೆ ಹೊರಟ ಮುಸಲ್ಮಾನರನ್ನು ಬೀಳ್ಕೊಡುವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದ ಮುಖ್ಯಮಂತ್ರಿ, ರಾಷ್ಟ್ರಕವಿ ಕುವೆಂಪು ಹೇಳಿದ ಸರ್ವರಿಗೂ ಸಮಬಾಳು ಸಮಪಾಲು ತತ್ವದಲ್ಲಿ ತಮ್ಮ ಸರ್ಕಾರಕ್ಕೆ ವಿಶ್ವಾಸವಿದೆ, ಜಾತಿ-ಧರ್ಮ ಯಾವುದೇ ಆಗಿರಲಿ, ಎಲ್ಲರಿಗೂ ಸಂವಿಧಾನದತ್ತ ಹಕ್ಕು ದಕ್ಕಲೇ ಬೇಕು, ಎಲ್ಲ ಸಮುದಾಯಗಳ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ