ನಾನು ಪಾದಯಾತ್ರೆ ಭಾಗಗಳಲ್ಲೆಲ್ಲ ಚುನಾವಣೆಗೆ ಸ್ಪರ್ಧಿಸುವುದು ಸಾಧ್ಯವಿಲ್ಲ: ಸಿದ್ದರಾಮಯ್ಯ

ನಾನು ಪಾದಯಾತ್ರೆ ಭಾಗಗಳಲ್ಲೆಲ್ಲ ಚುನಾವಣೆಗೆ ಸ್ಪರ್ಧಿಸುವುದು ಸಾಧ್ಯವಿಲ್ಲ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 10, 2022 | 10:58 AM

ತಾವು ರಾಜ್ಯದ ನಾನಾಭಾಗಗಳಲ್ಲಿ ಪಾದಯಾತ್ರೆ ಮಾಡುತ್ತಿದ್ದು ಆ ಎಲ್ಲಾ ಕ್ಷೇತ್ರಗಳಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಅಂತಲ್ಲ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡೋದು ಅನ್ನೋದನ್ನ ಆದಷ್ಟು ಬೇಗ ಹೇಳ್ತೀನಿ ಎಂದು ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿ:  ಬುಧವಾರ ಬೆಳಗ್ಗೆ ಹುಬ್ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಬದಲಾಯಿಸುತ್ತಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲವೆಂದು ಹೇಳಿದರು. ಮುಂದುವರಿದು ಮಾತಾಡಿದ ಅವರು ಅವರು ತಾವು ರಾಜ್ಯದ ನಾನಾಭಾಗಗಳಲ್ಲಿ ಪಾದಯಾತ್ರೆ ಮಾಡುತ್ತಿದ್ದು ಆ ಎಲ್ಲಾ ಕ್ಷೇತ್ರಗಳಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಅಂತಲ್ಲ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡೋದು ಅನ್ನೋದನ್ನ ಆದಷ್ಟು ಬೇಗ ಹೇಳ್ತೀನಿ ಎಂದರು