ನನ್ನ ಸಾರ್ವಜನಿಕ ಬದುಕು ಆರಂಭಗೊಂಡಿದ್ದೇ ಕಾಂಗ್ರೆಸ್ ಪಕ್ಷದಿಂದ: ಸಿಪಿ ಯೋಗೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 23, 2024 | 7:32 PM

ಎಲ್ಲ ನಿರ್ಧಾರಗಳನ್ನು ಸಾಕಷ್ಟು ಯೋಚಿಸಿ ತೆಗೆದುಕೊಂಡಿರುವುದಾಗಿ ಹೇಳಿದ ಯೋಗೇಶ್ವರ್, ನಾಳೆ ತಾನು ನಾಮಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಲ್ಲಿಸುವುದಾಗಿ ಹೇಳಿದರು.

ರಾಮನಗರ: ಚನ್ನಪಟ್ಟಣದ ಕಾಂಗ್ರೆಸ್ ಕಚೇರಿಗೆ ಹಲವಾರು ವರ್ಷಗಳ ನಂತರ ಆಗಮಿಸಿದ ಸಿಪಿ ಯೋಗೇಶ್ವರ್ ಅವರಿಗೆ ಸಿಕ್ಕಿದ್ದು ಭರ್ಜರಿ ಸ್ವಾಗತ. ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ತನ್ನ ಸಾರ್ವಜನಿಕ ಬದುಕು ಆರಂಭವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ, ದಶಕಗಳ ನಂತರ ಕಾಂಗ್ರೆಸ್​ಗೆ ವಾಪಸ್ಸಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ, ತಾಲ್ಲೂಕಿನ ಜನ ತನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕುಮಾರಸ್ವಾಮಿ ಹಠ ಮಾಡದಿದ್ದರೆ ಯೋಗೇಶ್ವರ್ ಪಕ್ಷಬಿಟ್ಟು ಹೋಗುತ್ತಿರಲಿಲ್ಲ: ಪ್ರೀತಂ ಗೌಡ   

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.