ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ರಾಜಕೀಯಕ್ಕೆ ಮಿಗಿಲಾದ ಬಾಂಧವ್ಯವಿದೆ: ಎಂಪಿ ರೇಣುಕಾಚಾರ್ಯ, ಬಿಜೆಪಿ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Aug 26, 2023 | 7:25 PM

ವಿಧಾನ ಸಭಾ ಚುನಾವಣೆಯಲ್ಲಿ ಸೋತಿದ್ದರೂ, ಕ್ಷೇತ್ರಕ್ಕಾಗಿ ದುಡಿಯುವುದನ್ನು ಮುಂದುವರಿಸಿರುವುದಾಗಿ ಹೇಳಿದ ಅವರು, ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ವರಿಷ್ಠರು ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು.

ದಾವಣಗೆರೆ: ನಿನ್ನೆ (ಶುಕ್ರವಾರ) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು (DK Shivakumar) ಅವರ ನಿವಾಸದಲ್ಲಿ ಭೇಟಿಯಾಗಿ ರಾಜಕೀಯ ವಲಯದಲ್ಲಿ ಬಹಳಷ್ಟು ಕುತೂಹಲ ಮೂಡಿಸಿದ್ದ ಹೊನ್ನಾಳಿಯ ಮಾಜಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಇಂದು ತಮ್ಮ ಸ್ವಕ್ಷೇತ್ರದಲ್ಲಿ ಭೇಟಿಯ ಕಾರಣ ಹೇಳಿದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ (Siddaramaiah) ಜೊತೆ ರಾಜಕೀಯಕ್ಕೆ ಮೀರಿದ ಬಾಂಧವ್ಯ ಇದೆ, ಹೊನ್ನಾಳಿಯಲ್ಲಿ ತಾವು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಅವರಿಬ್ಬರು ಭಾಗಿಯಾಗಿದ್ದಾರೆ. ವಿಧಾನಸಭೆಯಲ್ಲಿ 135 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಗೆ ತನ್ನ ಅವಶ್ಯಕತೆಯಿಲ್ಲ ಎಂದು ರೇಣುಕಾಚಾರ್ಯ ಹೇಳಿದರು. ಚುನಾವಣೆಯಲ್ಲಿ ಸೋತಿದ್ದರೂ, ಕ್ಷೇತ್ರಕ್ಕಾಗಿ ದುಡಿಯುವುದನ್ನು ಮುಂದುವರಿಸಿರುವುದಾಗಿ ಹೇಳಿದ ಅವರು, ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ವರಿಷ್ಠರು ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.