ನನ್ನ ಹೇಳಿಕೆಯನ್ನು ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಸ್ಪಷ್ಟನೆ

Edited By:

Updated on: Nov 03, 2026 | 10:52 PM

ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಪಕ್ಷದ ವಿರುದ್ಧ ನೀಡಿದ ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆ ಪಕ್ಷದ ನೀತಿಗಳ ಬಗ್ಗೆಯೇ ಹೊರತು ಯಾವುದೇ ವ್ಯಕ್ತಿಗಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು, ನವೆಂಬರ್​​ 03: ‘ಅರಾಜಕತೆ ಸೃಷ್ಟಿ ಮಾಡಿದರೆ ಕಾಂಗ್ರೆಸ್ ಪಕ್ಷವನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ’ ಎಂಬ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್​ ಕಾರ್ಯಕರ್ತರು ಅವರ ಮನೆಗೆ ಮುತ್ತಿಗೆ ಹಾಕಲು ಕೂಡ ಯತ್ನಿಸಿದ್ದಾರೆ. ಸಾಕಷ್ಟು ಆಕ್ರೋಶ ಬೆನ್ನಲ್ಲೇ ಇದೀಗ ಛಲವಾದಿ ನಾರಾಯಣಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ‘ಕಾಂಗ್ರೆಸ್ ಅರಾಜಕತೆ ಸೃಷ್ಟಿ ಮಾಡುತ್ತಿದೆ. ಈ ರೀತಿ ಅರಾಜಕತೆಯನ್ನು ಸೃಷ್ಟಿ ಮಾಡುವ ಕಾಂಗ್ರೆಸ್ ಪಕ್ಷವನ್ನು ಜನ ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಹಾಕುತ್ತಾರೆ ಎಂದು ನಾನು ಹೇಳಿರುವುದು ಸರಿ ಇದೆ. ನಾನು ಭಾಷಣ ಮಾಡುವ ಸಮಯದಲ್ಲಿ ಪಕ್ಷದ ಬಗ್ಗೆ ಹೇಳಿದ್ದೇನೆ. ಇದು ಪ್ರಚೋದನಕಾರಿ ಹೇಳಿಕೆ ಅಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಪಕ್ಷದ ಬಗ್ಗೆ ಹೇಳಿದ್ದೇನೆ ಹೊರತು ವ್ಯಕ್ತಿಗತ ಅಲ್ಲ. ನಾನು ವ್ಯಕ್ತಿಗತವಾಗಿ ಯಾರನ್ನು ನೋ ಯಿಸಿಲ್ಲ. ಇದು ಪಕ್ಷಕ್ಕೆ ಸಂಬಂಧಿಸಿರುವುದು’ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More