ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್: ಮೈಲಾರಲಿಂಗೇಶ್ವರ ಕಾರ್ಣಿಕದ ಅರ್ಥವೇನು?
ಹಾನಗಲ್ ತಾಲೂಕಿನ ಆಡೂರಿನ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ, ಗೊರವಯ್ಯ ಎಂಬವರು ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಎಂದು ದೈವವಾಣಿ ನುಡಿದಿದ್ದಾರೆ. ಇದು ಪ್ರಸಕ್ತ ವರ್ಷ ಉತ್ತಮ ಮಳೆಯಾಗುವುದು ಮತ್ತು ಬೆಳೆಗಳು ಸಮೃದ್ಧವಾಗಿ ಬರುವುದರ ಸೂಚನೆ ಎಂದು ಗ್ರಾಮಸ್ಥರು ನಂಬಿದ್ದಾರೆ. 12 ಅಡಿ ಎತ್ತರದ ಬಿಲ್ಲೇರಿನ ಮೇಲೆ ಈ ಭವಿಷ್ಯವಾಣಿ ನಡೆದಿದೆ.
ಹಾವೇರಿ, ಫೆಬ್ರವರಿ 12: ಜಿಲ್ಲೆ ಹಾನಗಲ್ ತಾಲ್ಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಕಾರ್ಣಿಕ (karnika) ನುಡಿಯಲಾಗಿದೆ. ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್ ಎಂದು 12 ಅಡಿ ಎತ್ತರದ ಬಿಲ್ಲೇರಿ ಗೊರವಯ್ಯ ಹನುಮನಗೌಡ ಗುರೇಗೌಡರ ದೈವವಾಣಿ ನುಡಿದಿದ್ದಾರೆ. ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಸಮೃದ್ಧವಾಗಿ ಬೆಳೆಗಳು ಬರಲಿವೆ ಎಂದು ಗ್ರಾಮಸ್ಥರು ವಿಶ್ಲೇಷಣೆ ಮಾಡಿದ್ದಾರೆ.
ವರದಿ: ಅಣ್ಣಪ್ಪ ಬಾರ್ಕಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos