ಟೈಟ್​ ಆಗಿ ಪಬ್​ನಲ್ಲಿ ಗಲಾಟೆ ಮಾಡಿದ್ದ ಇನ್ಸ್‌ಪೆಕ್ಟರ್ ಅಮಾನತು

Edited By: ವಿವೇಕ ಬಿರಾದಾರ

Updated on: Aug 18, 2025 | 10:26 PM

ಮೈಸೂರಿನ ಸಿಸಿಬಿ ಇನ್ಸ್‌ಪೆಕ್ಟರ್ ಮೋಹನ್ ಕುಮಾರ್ ಅವರು ಪಬ್‌ನಲ್ಲಿ ಮದ್ಯಪಾನ ಮಾಡಿ ಗಲಾಟೆ ಮಾಡಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಹಾಡು ಹಾಕಿಸುವಂತೆ ಒತ್ತಾಯಿಸಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಅವರನ್ನು ಅಮಾನತುಗೊಳಿಸಿದ್ದಾರೆ. ಇನ್ಸ್‌ಪೆಕ್ಟರ್‌ನ ಈ ನಡವಳಿಕೆ ತೀವ್ರ ಟೀಕೆಗೆ ಒಳಗಾಗಿದೆ.

ಮೈಸೂರು, ಆಗಸ್ಟ್​ 18: ಮದ್ಯ ಸೇವಿಸಿ ಪಬ್‌ನಲ್ಲಿ ಗಾಲಾಟೆ ಮಾಡಿದ್ದ ಮೈಸೂರು ಸಿಸಿಬಿ ಇನ್ಸ್‌ಪೆಕ್ಟರ್ ಮೋಹನ್ ಕುಮಾರ್ ಅವರನ್ನು ಅಮಾನತು ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಜೆ.ಸಿ.ನಗರದ ಪಬ್‌ನಲ್ಲಿ ಕುಡಿದು ಟೈಟ್​ ಆಗಿ ಪುನೀತ್ ಹಾಡು ಹಾಕುವಂತೆ ಗಲಾಟೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ಪಬ್ ಸಿಬ್ಬಂದಿಗೆ ಆವಾಜ್ ಹಾಕಿದ್ದಾರೆ. ಇನ್ಸ್‌ಪೆಕ್ಟರ್ ಮೋಹನ್ ಕುಮಾರ್ ಗಲಾಟೆ ಮಾಡಿದ ವಿಡಿಯೋ ವೈರಲ್ ಆಗಿತ್ತು.

Published on: Aug 18, 2025 10:22 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More