Mysore Dasara 2023: ನಮ್ಮ ಸಂವಿಧಾನ ನಮ್ಮ ಹಕ್ಕು; ವಿಶೇಷ ಲೈಟಿಂಗ್​ನಿಂದ ಕಂಗೊಳಿಸುತ್ತಿರುವ ಸಾಂಸಕೃತಿಕ ನಗರಿ

Mysore Dasara 2023: ನಮ್ಮ ಸಂವಿಧಾನ ನಮ್ಮ ಹಕ್ಕು; ವಿಶೇಷ ಲೈಟಿಂಗ್​ನಿಂದ ಕಂಗೊಳಿಸುತ್ತಿರುವ ಸಾಂಸಕೃತಿಕ ನಗರಿ

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Oct 15, 2023 | 7:55 AM

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

ಮೈಸೂರು, ಅ.15: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2023) ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರು ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹದೇವಪ್ಪ, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ಗೆ ಕಂಕಣಧಾರಣೆ ಮಾಡಲಾಗಿದ್ದು ಮುಂಜಾನೆ 5 ಗಂಟೆಯಿಂದ ಅರಮನೆಯಲ್ಲಿ ಸಾಂಪ್ರದಾಯಿಕ ಕಾರ್ಯಕ್ರಮಗಳು ಆರಂಭವಾಗಿವೆ. ದಸರಾ ನಿಮಿತ್ತ ಮೈಸೂರು ತುಂಬೆಲ್ಲ ವಿಶೇಷ ವಿದ್ಯುತ್​​ ದೀಪಾಲಂಕಾರ ಮಾಡಲಾಗಿದೆ. ಹೇಗಿದೆ ವಿಶೇಷ ಲೈಟಿಂಗ್​? ಇಲ್ಲಿದೆ ನೋಡಿ