Mysore Dasara Inauguration Live: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ

Updated on: Sep 22, 2025 | 9:57 AM

ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ: ನಾಡ ಹಬ್ಬ ದಸರಾಗೆ ಇಂದು ಬೆಳಗ್ಗೆ 10.10 ರಿಂದ 10.40 ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಹಿತಿ ಬಾನು ಮುಷ್ತಾಕ್ ಚಾಲನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾದರೆ ಇತ್ತ ಅರಮನೆಯಲ್ಲಿ ಯದುವೀರ್ ಒಡೆಯರ್ 11ನೇ ಬಾರಿಗೆ ಖಾಸಗಿ ದರ್ಬಾರ್ ನಡೆಸಿದರು.

ಮೈಸೂರು, ಸೆಪ್ಟೆಂಬರ್​ 22: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ (Dasara) ಉದ್ಘಾಟನೆಗೊಂಡಿದೆ. ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ ನೀಡಿದರು. ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಉಪಸ್ಥಿತರಿದ್ದರು. ಇನ್ನು ಅರಮನೆಯಲ್ಲಿ ಯದುವೀರ್ ಒಡೆಯರ್ ಖಾಸಗಿ ದರ್ಬಾರ್ ನಡೆಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.