AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಜಂಬೂ ಸವಾರಿಗೂ ಮುನ್ನ ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್

ಮೈಸೂರು ದಸರಾ: ಜಂಬೂ ಸವಾರಿಗೂ ಮುನ್ನ ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್

ಅಕ್ಷತಾ ವರ್ಕಾಡಿ
|

Updated on:Oct 21, 2026 | 12:05 PM

Share

ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಕಾರ್ಯಕ್ರಮಗಳಿಗೆ ರಾಜವಂಶಸ್ಥ ಯದುವೀರ್ ಒಡೆಯರ್ ವಿದ್ಯುಕ್ತ ಚಾಲನೆ ನೀಡಿದರು. ಜಂಬೂ ಸವಾರಿಗೂ ಮುನ್ನ ಅರಮನೆಯಲ್ಲಿ ಹಲವು ಪೂಜಾ ಕಾರ್ಯಗಳನ್ನು ನೆರವೇರಿಸಿದ ಯದುವೀರ್, ಮಂಗಳವಾದ್ಯಗಳೊಂದಿಗೆ ಭುವನೇಶ್ವರಿ ದೇಗುಲಕ್ಕೆ ಆಯುಧಗಳ ಮೆರವಣಿಗೆ ಮಾಡಿ, ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಆರಂಭಕ್ಕೂ ಮುನ್ನ, ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಅರಮನೆಯಲ್ಲಿ ಹಲವು ಸಾಂಪ್ರದಾಯಿಕ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಮೈಸೂರಿನ ಐತಿಹಾಸಿಕ ಅರಮನೆಯು ವಿಜಯದಶಮಿಯ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಸಾಂಪ್ರದಾಯಿಕ ಮಂಗಳವಾದ್ಯಗಳ ಘೋಷದೊಂದಿಗೆ, ಯದುವೀರ್ ಒಡೆಯರ್ ಅವರು ಭುವನೇಶ್ವರಿ ದೇಗುಲಕ್ಕೆ ಆಯುಧಗಳ ಮೆರವಣಿಗೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ರಾಜವಂಶಸ್ಥರು ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯುವ ಮೂಲಕ ಪೂರ್ವಜರ ಸಂಪ್ರದಾಯವನ್ನು ಮುಂದುವರೆಸಿದರು. ನಂತರ, ಬನ್ನಿ ವೃಕ್ಷಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸುವ ಮೂಲಕ ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

 

Published on: Oct 21, 2026 12:03 PM

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More