ಹೀಟ್ ವೇವ್ ಎದುರಿಸಲು ಮೈಸೂರಿನ ಆಸ್ಪತ್ರೆ ಸನ್ನದ್ಧ; ರೋಗಿಗಳಿಗಾಗಿ ಬೆಡ್ ಮೀಸಲು, ವಾರ್ಡ್‌ನಲ್ಲಿ ಎಸಿ, ಫ್ಯಾನ್ ಅಳವಡಿಕೆ!

Edited By:

Updated on: Apr 24, 2026 | 2:37 PM

ನಗರದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಹೆಚ್ಚು ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಮೈಸೂರು, ಏಪ್ರಿಲ್ 24: ನಗರದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಹೆಚ್ಚು ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಕೆ.ಆರ್ ಆಸ್ಪತ್ರೆಯಲ್ಲಿ 20 ಬೆಡ್‌ಗಳು ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ 15 ಬೆಡ್‌ಗಳನ್ನು ಬಿಸಿಲಿನ ಪರಿಣಾಮದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ, ಮಕ್ಕಳ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್ ವ್ಯವಸ್ಥೆ ಮಾಡಲಾಗಿದ್ದು, ರೋಗಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಲಾಗಿದೆ. ಆರೋಗ್ಯ ಇಲಾಖೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಅಗತ್ಯ ಸಲಹೆಗಳನ್ನು ನೀಡುತ್ತಿದೆ.

 

 

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More